Friday, March 13, 2026
HomeStateಎಸ್‌ಡಿಎಂಸಿ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ಎಸ್‌ಡಿಎಂಸಿ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ಬೆಟ್ಟದಪುರ: ಶಾಲೆಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಎಸ್‌ಡಿಎಂಸಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹಿರಿಯ ಶಿಕ್ಷಕ ಕೆ.ಸಿ. ಸತೀಶ್ ತಿಳಿಸಿದರು.

ಸಮೀಪದ ಭುವನಹಳ್ಳಿ ಕ್ಲಸ್ಟರ್ ಮಟ್ಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಎಸ್‌ಡಿಎಂಸಿ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಎಸ್‌ಡಿಎಂಸಿ ರಚನೆ, ಸದಸ್ಯರ ಜವಾಬ್ದಾರಿಗಳು ಮತ್ತು ಕರ್ತವ್ಯಗಳು, ಸರ್ಕಾರದಿಂದ ದೊರೆಯುವ ವಿವಿಧ ಸವಲತ್ತುಗಳು,ಅನುದಾನಗಳ ಸರಿಯಾದ ಬಳಕೆ ಕುರಿತು ಸದಸ್ಯರು ವಹಿಸಬೇಕಾದ ಕ್ರಮದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಕ್ಲಸ್ಟರ್ ಮಟ್ಟದ 12 ಶಾಲೆಯ ಎಸ್ ಡಿ ಎಂ ಸಿ ಸದಸ್ಯರು ಭಾಗವಹಿಸಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸರೋಜಮ್ಮ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಧುರೇಶ್, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸುರೇಶ್, ಬಡ್ತಿ ಮುಖ್ಯ ಶಿಕ್ಷಕ ಚನ್ನೇಗೌಡ, ವಿಜಯ್ ಕುಮಾರ್, ನಿಂಗೇಗೌಡ, ನಂದೀಶ್, ಮೂರ್ತಿ, ಗೀತಾ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share