Home Others ಪಾಕಿಸ್ತಾನದಲ್ಲಿ ಸುಡುತ್ತಿದೆ ಪೆಟ್ರೋಲ್-ಡೀಸೆಲ್ ಬೆಲೆ!

ಪಾಕಿಸ್ತಾನದಲ್ಲಿ ಸುಡುತ್ತಿದೆ ಪೆಟ್ರೋಲ್-ಡೀಸೆಲ್ ಬೆಲೆ!

0
64

ಮಧ್ಯಪ್ರಾಚ್ಯದಲ್ಲಿ ನಿರ್ಮಾಣವಾಗಿರುವ ಯುದ್ಧ ವಾತಾವರಣದ ಪರಿಣಾಮವಾಗಿ ಪಶ್ಚಿಮ ಏಷ್ಯಾದಲ್ಲಿ ಇಂಧನ ಮಾರುಕಟ್ಟೆ ಮೇಲೆ ಒತ್ತಡ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಪಾಕಿಸ್ತಾನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆ ಮಾಡಲಾಗಿದೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಯನ್ನು ಹಿನ್ನೆಲೆಯಾಗಿ ತೆಗೆದುಕೊಂಡು ಪಾಕಿಸ್ತಾನ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು 55 ಪಾಕಿಸ್ತಾನಿ ರೂಪಾಯಿ (PKR) ಹೆಚ್ಚಿಸಿದೆ. ಹೊಸ

Ad

ಡೀಸೆಲ್ ಬೆಲೆ 275.70 ರೂಪಾಯಿಯಿಂದ 335.86 ರೂಪಾಯಿಗೆ ಏರಿಕೆಯಾಗಿದೆ. ಈ ಭಾರೀ ಏರಿಕೆಯಿಂದಾಗಿ ಸಾಮಾನ್ಯ ಜನರ ಮೇಲೆ ಮತ್ತಷ್ಟು ಆರ್ಥಿಕ ಭಾರ ಬಿದ್ದಿದೆ.

ದೇಶದಲ್ಲಿ ಇಂಧನ ಕೊರತೆ ಉಂಟಾಗಬಹುದು ಎಂಬ ಸುದ್ದಿ ಹರಡಿರುವುದರಿಂದ ಪಾಕಿಸ್ತಾನದ ಹಲವೆಡೆ ಪೆಟ್ರೋಲ್ ಬಂಕ್‌ಗಳ ಮುಂದೆ ಜನರು ವಾಹನಗಳೊಂದಿಗೆ ಸಾಲುಗಟ್ಟಿ ನಿಂತು ಇಂಧನ ತುಂಬಿಸಿಕೊಳ್ಳುತ್ತಿರುವ ದೃಶ್ಯಗಳು ಕಂಡುಬರುತ್ತಿವೆ. ಈ ಘಟನೆಗಳಿಗೆ ಸಂಬಂಧಿಸಿದ ಹಲವು ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

NO COMMENTS

LEAVE A REPLY

Please enter your comment!
Please enter your name here

error: Content is protected !!