Friday, July 24, 2026
Join WhatsApp Group
HomeLocal Newsಎಲ್ಲಾ ವಿದ್ಯಾರ್ಥಿಗಳು ಹಾಜರಾಗಲು ವ್ಯವಸ್ಥೆ ಕಲ್ಪಿಸಿ

ಎಲ್ಲಾ ವಿದ್ಯಾರ್ಥಿಗಳು ಹಾಜರಾಗಲು ವ್ಯವಸ್ಥೆ ಕಲ್ಪಿಸಿ

ಕಾರವಾರ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೋಂದಾಯಿಸಿರುವ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ಕುರಿತಂತೆ, ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಮತ್ತು ಯಾವುದೇ ವಿದ್ಯಾರ್ಥಿ ಗೈರು ಹಾಜರಾಗದಂತೆ ಎಚ್ಚರ ವಹಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.

ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಜಿಲ್ಲೆಯ 73 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಬಾರಿಯ ಜಿಲ್ಲೆಯಲ್ಲಿ ಒಟ್ಟು 19988 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆ ಕುರಿತಂತೆ ವಿದ್ಯಾರ್ಥಿಗಳಿಗೆ ಈ ಬಾರಿ ಶಿಕ್ಷಣ ಇಲಾಖೆವತಿಯಿಂದ ಉತ್ತಮ ರೀತಿಯಲ್ಲಿ ತರಬೇತಿ ನೀಡಿದ್ದು, ಪರೀಕ್ಷಾ ಹಾಜರಾತಿಯು ಶೇ.100 ಆದಲ್ಲಿ ಫಲಿತಾಂಶವೂ ಶೇ.100 ಬರಬಹುದಾದ ಎಲ್ಲಾ ಸಾಧ್ಯತೆಗಳಿರುವ ಕಾರಣ, ಯಾವುದೇ ವಿದ್ಯಾರ್ಥಿ ಗೈರು ಹಾಜರಾಗದಂತೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ತಿಳಿಸಿದರು.

 ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಅಗತ್ಯವಿರುವ  ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಮತ್ತು ಪರೀಕ್ಷಾ ಮಂಡಳಿಯು ಸೂಚಿಸಿರುವಂತೆ  ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಯಾವುದೇ ಲೋಪವಾಗದಂತೆ ಪರೀಕ್ಷೆಗಳನ್ನು ನಡೆಸಬೇಕು  ಎಂದರು.

ಪರೀಕ್ಷಾ ಮಂಡಳಿಯ ಮಾರ್ಗಸೂಚಿಯಂತೆ ಪರೀಕ್ಷೆಗಳನ್ನು ಸಿಸಿಟಿವಿ ಕಣ್ಗಾವಲುನಲ್ಲಿ ನಡೆಸಬೇಕು ಹಾಗೂ ವೆಬ್ ಕಾಸ್ಟಿಂಗ್ ನಿರ್ವಹಣೆಗೆ ಮಾಡಬೇಕು. ಪರೀಕ್ಷೆ ಕೊಠಡಿಯೊಳಗೆ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ಫೋನ್, ಮೈಕ್ರೋಫೋನಗಳು, ಬ್ಲೂಟೂತ್ ಸಾಧನ ಅನುಮತಿಸಲಾಗುವುದಿಲ್ಲ. ಸಿಬ್ಬಂದಿಗಳ ಮೊಬೈಲ್ ಬಳಕೆಗೂ ಅವಕಾಶವಿಲ್ಲ, ಫೋಟೋಗ್ರಾಫಿಯನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದರು.

ಪರೀಕ್ಷಾ ಕರ್ತವ್ಯಕ್ಕೆ ನಿಯೋಜಸಿರುವ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯುತವಾಗಿ ಹಾಗೂ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಧಿಕಾರಿ ಡಾ. ದಿಲೀಶ್ ಶಶಿ, ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲತಾ ನಾಯ್ಕ ಹಾಗೂ ವರ್ಚುವಲ್ ಮೂಲಕ ಎಲ್ಲಾ ತಾಲೂಕುಗಳ ತಹಸೀಲ್ದಾರರು ಮತ್ತು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಸಿರುವ ಅಧಿಕಾರಿಗಳು ಇದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share