Saturday, May 30, 2026
HomeEducationಈ ಎಲ್ಲಾ ತರಬೇತಿಗಳು ಸಂಪೂರ್ಣ ಉಚಿತ!

ಈ ಎಲ್ಲಾ ತರಬೇತಿಗಳು ಸಂಪೂರ್ಣ ಉಚಿತ!

ತೋಟಗಾರಿಕೆ ತರಬೇತಿ

ಕಾರವಾರ: ತೋಟಗಾರಿಕೆ ಇಲಾಖೆಯಿಂದ ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿರುವ 10 ತಿಂಗಳ ತೋಟಗಾರಿಕೆ ತರಬೇತಿಗೆ ಉತ್ತರ ಕನ್ನಡ ಜಿಲ್ಲೆಯ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೇ 2ರಿಂದ 28 ಫೆಬ್ರವರಿ 2027ರವರೆಗೆ ತರಬೇತಿ ನಡೆಯಲಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು, ಜೊತೆಗೆ ಅಭ್ಯರ್ಥಿ ಅಥವಾ ಅವರ ತಂದೆ ತಾಯಿ / ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು.

ಈ ಬಗ್ಗೆ, ಕಂದಾಯ ಇಲಾಖೆಯಿಂದ ದೃಢೀಕರಣ ಪತ್ರ ಸಲಿಸಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 18ರಿಂದ 33 ವರ್ಷ ಹಾಗೂ ಇತರೆ ಅಭ್ಯರ್ಥಿಗಳಿಗೆ 18ರಿಂದ 30 ವರ್ಷ ವಯೋಮಿತಿ ನಿಗದಿಯಾಗಿದೆ. ತರಬೇತಿಗೆ ಆಯ್ಕೆಯಾದವರಿಗೆ ತರಬೇತಿ ಕೇಂದ್ರದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ಒದಗಿಸಲಾಗುತ್ತದೆ.

ಅರ್ಜಿ ನಮೂನೆಗಳನ್ನು ತೋಟಗಾರಿಕೆ ಜಂಟಿ ನಿರ್ದೇಶಕರ ಕಚೇರಿ, ಶಿರಸಿ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ರಾಜ್ಯ ವಲಯ) ಕಚೇರಿ ಕಾರವಾರ ಹಾಗೂ ಇಲಾಖೆಯ ವೆಬ್‌ಸೈಟ್ horticulturedir.karnataka.gov.in ನಲ್ಲಿ ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 15ರಂದು ಸಂಜೆ 5.30ರೊಳಗೆ ಸಂಬಂಧಿತ ಕಛೇರಿಗಳಿಗೆ ಸಲ್ಲಿಸಬೇಕು. ಅಭ್ಯರ್ಥಿಗಳ ಸಂದರ್ಶನ ಏಪ್ರಿಲ್ 23ರಂದು ಶಿರಸಿಯ ತೋಟಗಾರಿಕೆ ಜಂಟಿ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ. ಆಯ್ಕೆ ಪಟ್ಟಿಯನ್ನು ಏಪ್ರಿಲ್ 27 ಪ್ರಕಟಿಸಲಾಗುವುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಚಿತ ಕೌಶಲ್ಯಾಧಾರಿತ ತರಬೇತಿ

ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18ರಿಂದ 50 ವರ್ಷ ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗಾಗಿ ಏಪ್ರಿಲ್ ತಿಂಗಳಿನಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡಿಷನಿಂಗ್ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಿಕೊಳ್ಳಲು ಮಾ. 30ಕೊನೆಯ ದಿನವಾಗಿದೆ. ತರಬೇತಿ ಅವಧಿಯಲ್ಲಿ ಊಟ ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶಿಲತೇಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟದ ತಂತ್ರಗಳು, ಯಶಸ್ವಿ ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಭೇಟಿ, ಸಾಫ್ಟ್ ಸ್ಟೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ 8217236973, 9483485489, 9482188780 ನ್ನು ಸಂಪರ್ಕಿಸಬಹುದು ಎಂದು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಂಪ್ಯೂಟರ್ ಡಿ.ಟಿ.ಪಿ ಉಚಿತ ತರಬೇತಿ

ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಕಂಪ್ಯೂಟರ್ ಡಿ.ಟಿ.ಪಿ (Desktop Publishing) ಕುರಿತು 45 ದಿನಗಳ ಉಚಿತ ತರಬೇತಿಯನ್ನು ಏ. 2ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಸಕ್ತರು 18ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380162042, 9481506564, 9481778047 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share