Friday, July 24, 2026
Join WhatsApp Group
HomeNational10 ಕೆಜಿ ಎಲ್ಪಿಜಿ ಡಮ್ಮಿ!

10 ಕೆಜಿ ಎಲ್ಪಿಜಿ ಡಮ್ಮಿ!

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ದೇಶದಲ್ಲಿ ಎಲ್‌ಪಿಜಿ ಕೊರತೆ ಉಂಟಾಗಿ, 14.2 ಕೆಜಿ ಗೃಹ ಬಳಕೆ ಸಿಲಿಂಡರ್‌ಗಳಲ್ಲಿ ಕೇವಲ 10 ಕೆಜಿ ಎಲ್‌ಪಿಜಿ ಮಾತ್ರ ಪೂರೈಕೆ ಮಾಡಲಾಗುತ್ತದೆ ಎಂಬ ವರದಿಗಳು ಹರಿದಾಡುತ್ತಿದ್ದವು.

ಆದರೆ ಈ ಕುರಿತಾಗಿ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಇವುಗಳನ್ನು ವದಂತಿಗಳೆಂದು ತಳ್ಳಿ ಹಾಕಿದೆ. ಈ ಕುರಿತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಪ್ರತಿಕ್ರಿಯಿಸಿ, “ಇವೆಲ್ಲವೂ ಕೇವಲ ಊಹಾಪೋಹ. ಇಂತಹ ವದಂತಿಗಳಿಗೆ ಯಾವುದೇ ಅಧಿಕೃತ ಹೇಳಿಕೆ ಅಥವಾ ವಿವರಣೆ ನೀಡಲು ಸಾಧ್ಯವಿಲ್ಲ. ಸುಳ್ಳು ಸುದ್ದಿಗಳನ್ನು ನಂಬಬೇಡಿ” ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಈ ಸ್ಪಷ್ಟನೆ ಹಿನ್ನೆಲೆಯಲ್ಲಿ, ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದು ತಿಳಿದುಬಂದಿದೆ. ಹೀಗಾಗಿ ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share