Friday, July 24, 2026
Join WhatsApp Group
HomeLocal Newsಸ್ವಯಂ ಗಣತಿ ಮಾಡಿ, ಜವಾಬ್ದಾರಿಯುತ ನಾಗರಿಕರಾಗಿ!

ಸ್ವಯಂ ಗಣತಿ ಮಾಡಿ, ಜವಾಬ್ದಾರಿಯುತ ನಾಗರಿಕರಾಗಿ!

ಜನಗಣತಿಯು ದೇಶದ ಜನಸಂಖ್ಯೆಯ ಗಣತಿಯ ಜೊತೆಗೆ, ದೇಶದ ಸಾಮಾಜಿಕ-ಆರ್ಥಿಕ ಸ್ಥಿತಿಗಳು ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ದಾಖಲಿಸುವ ವೈಜ್ಞಾನಿಕ ಪ್ರಕ್ರಿಯೆಯಾಗಿದ್ದು ಭಾರತದ ಮೊದಲ ಡಿಜಿಟಲ್ ಜನಗಣತಿ ಮತ್ತು 16ನೇ ಜನಗಣತಿಯು ಏಪ್ರಿಲ್ ನಿಂದ 2 ಹಂತದಲ್ಲಿ ಆರಂಭಗೊಳ್ಳಲಿದೆ.

ಈ ಜನಗಣತಿಯ ಅಂಗವಾಗಿ ಸಾರ್ವಜನಿಕರು ಸುರಕ್ಷಿತ ವೆಬ್ ಪೋರ್ಟಲ್ ಮೂಲಕ ಸ್ವಯಂ-ಗಣತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬಹುದಾಗಿದೆ.

ಜಿಲ್ಲೆಯಲ್ಲಿ ಮನೆ ಪಟ್ಟಿ ಮತ್ತು ಮನೆಗಣತಿ ಕಾರ್ಯವು ಏಪ್ರಿಲ್ 16ರಿಂದ ಆರಂಭವಾಗಲಿದ್ದು, ಇದಕ್ಕೂ ಮುನ್ನ 15 ದಿನಗಳ ಮುಂಚಿತವಾಗಿ ಅಂದರೆ ಏಪ್ರಿಲ್ 1ರಿಂದ 15 ವರೆಗೆ ಸ್ವಯಂ ಗಣತಿ ಕಾರ್ಯಕ್ಕೆ ಅವಕಾಶ ನೀಡಲಾಗಿದೆ.

ಸಾರ್ವಜನಿಕರು ಸ್ವಯಂ ಗಣತಿ ವೆಬ್ ಪೋರ್ಟಲ್ se.census.gov.in  ಬಳಸಿಕೊಂಡು ತಮ್ಮ ಕುಟುಂಬದ ಸಾಮಾನ್ಯ ಮಾಹಿತಿಯನ್ನು ಆನ್‌ಲೈನ್ ಮೂಲಕ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಏ. 1ರಿಂದ 15ರವರೆಗೆ ಸ್ವಯಂ ಗಣತಿ ವೆಬ್ ಪೋರ್ಟಲ್ ಲಭ್ಯವಿದ್ದು, ಮೊಬೈಲ್, ಡೆಸ್ಕ್‌ಟಾಪ್, ಲ್ಯಾಪ್ಟಾಪ್ ಸಾಧನಗಳ ಮೂಲಕ ನಮೂದಿಸಬಹುದು. ಇದರಿಂದ ಸಮಯದ ಉಳಿತಾಯ ಜೊತೆಗೆ ನಿಖರ ಹಾಗೂ ಸಮಗ್ರ ಮಾಹಿತಿಯನ್ನು ಸಂಗ್ರಹಿಸಲು ಸಹಕಾರಿ ಆಗಲಿದೆ.

ಮಾಹಿತಿ ಭರ್ತಿಯ ವೇಳೆ ಕುಟುಂಬಗಳು ತಮ್ಮ ಸ್ಥಳದ ವಿವರಗಳನ್ನು (ರಾಜ್ಯ, ಜಿಲ್ಲೆ, ತಾಲ್ಲೂಕು, ಗ್ರಾಮ/ಪಟ್ಟಣ/ನಗರ ಇತ್ಯಾದಿ) ಕಡ್ಡಾಯವಾಗಿ ನಮೂದಿಸಬೇಕು. ಸ್ಥಳವನ್ನು ನಿಖರವಾಗಿ ಗುರುತಿಸಲು ಪಿನ್ ಕೋಡ್ ಮತ್ತು ಡಿಜಿಟಲ್ ಮ್ಯಾಪ್ ಮೂಲಕ ಮನೆಯ ಸ್ಥಳವನ್ನು ಗುರುತಿಸುವ ವ್ಯವಸ್ಥೆಯೂ ಇರುತ್ತದೆ.

ಸ್ವಯಂ-ಗಣತಿ (Self-Enumeration) ಪೋರ್ಟಲ್‌ನಲ್ಲಿ ಕೇಳಿರುವ ಕೇಳುವ ಪ್ರಶ್ನೆಗಳಿಗೆ ಮನೆಪಟ್ಟಿ ಕಾರ್ಯಾಚರಣೆ ಮೊಬೈಲ್ ಆಪ್ ನಲ್ಲಿರುವಂತೆಯೇ ರೂಪಿಸಲಾಗಿದ್ದು, ಕೆಲವು ಮಾಹಿತಿಗಳು ಪೂರ್ವಭರ್ತಿಯಾಗಿರಬಹುದು. ಸಾರ್ವಜನಿಕರಿಗೆ ಸಹಾಯವಾಗುವಂತೆ ಪದೇ ಪದೇ ಕೇಳುವ ಪ್ರಶ್ನೆಗಳು (FAQs) ಮತ್ತು ಮಾರ್ಗಸೂಚಿಗಳನ್ನೂ ಇದರಲ್ಲಿ ಒದಗಿಸಲಾಗಿದೆ.

ಕುಟುಂಬವು ತಮ್ಮ ಮಾಹಿತಿಯನ್ನು ಯಶಸ್ವಿಯಾಗಿ ಸಲ್ಲಿಸಿದ ನಂತರ, ಅವರಿಗೆ ಒಂದು ವಿಶಿಷ್ಟ ಸ್ವಯಂ-ಗಣತಿ ಐಡಿ (Self-Enumeration ID) ನೀಡಲಾಗುತ್ತದೆ. ಈ ಐಡಿಯನ್ನು ಎಸ್‌ಎಂಎಸ್ ಮತ್ತು ಇಮೇಲ್ ಮೂಲಕ ಕಳುಹಿಸಲಾಗುತ್ತದೆ. ಅದನ್ನು ಮನೆಗೆ ಭೇಟಿ ನೀಡುವ ಗಣತಿದಾರರಿಗೆ (Enumerator) ಈ ಐಡಿಯನ್ನು ಹಂಚಿಕೊಳ್ಳಬಹುದು.

ಸಾರ್ವಜನಿಕರು ತಮ್ಮ ಜನಗಣತಿ ವಿವರಗಳನ್ನು ಆನ್‌ಲೈನ್‌ನಲ್ಲಿ ವೇಗವಾಗಿ ಮತ್ತು ಸುರಕ್ಷಿತವಾಗಿ ಭರ್ತಿ ಮಾಡಬಹುದಾಗಿದ್ದು, ಏಪ್ರಿಲ್ 16ರಿಂದ ಮೇ 15ರವರೆಗಿನ ಅವಧಿಯಲ್ಲಿ ಗಣತಿದಾರರು ಮನೆಗೆ ಭೇಟಿ ನೀಡಿ ವಿವರಗಳನ್ನು ಪರಿಶೀಲಿಸುತ್ತಾರೆ. ಈ ವೇಳೆಯಲ್ಲಿ ನಿಮ್ಮ SE ID ಅನ್ನು (Enumerator)  ಮನೆಗೆ ಬಂದಾಗ ಅದನ್ನು ಹಂಚಿಕೊಳ್ಳಬಹುದು.

ಒಂದು ವೇಳೆ ಸಾರ್ವಜನಿಕರು ತಮ್ಮ ಸ್ವಯಂ ಗಣತಿ ಪೂರ್ಣಗೊಳಿಸದಿದ್ದರೆ, ಗಣತಿದಾರರು ತಮ್ಮಿಂದಲೇ ಮಾಹಿತಿಯನ್ನು ಸಂಗ್ರಹಿಸುತ್ತಾರೆ. ಸ್ವಯಂ ಗಣತಿಯು 100% ಗೌಪ್ಯತೆಯ ಭದ್ರತೆಯನ್ನು ನೀಡಲಿದ್ದು, ಪ್ರತಿಯೊಬ್ಬರೂ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ, ದೇಶದ ಜವಾಬ್ದಾರಿಯುತ ನಾಗರಿಕರಾಗಬೇಕಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share