Friday, July 24, 2026
Join WhatsApp Group
HomeStateಕುಕ್ಕರ್‌ ಸ್ಫೋಟಿಸಿದ್ದಕ್ಕೆ ಪಶ್ಚಾತ್ತಾಪ! ಮೊಹಮ್ಮದ್‌ ಶಾರೀಕ್‌ ತಪ್ಪೊಪ್ಪಿಗೆ?

ಕುಕ್ಕರ್‌ ಸ್ಫೋಟಿಸಿದ್ದಕ್ಕೆ ಪಶ್ಚಾತ್ತಾಪ! ಮೊಹಮ್ಮದ್‌ ಶಾರೀಕ್‌ ತಪ್ಪೊಪ್ಪಿಗೆ?

ಮಂಗಳೂರು: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಬೆಳವಣಿಗೆ ಕಂಡು ಬಂದಿದೆ.

ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಮೊಹಮ್ಮದ್‌ ಶಾರೀಕ್‌ ತಪ್ಪೊಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯವು ಅಂಗೀಕಾರ ಮಾಡಿದೆ.

ನವೆಂಬರ್‌ 19,2022ರಂದು ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಫ್ರೆಶರ್‌ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡ ಪರಿಣಾಮ ಆರೋಪಿ ಗಂಭೀರ ಗಾಯಗೊಂಡಿದ್ದ.

ಟೈಮರ್‌ ದೋಷದಿಂದ ಸಂಭವಿಸಿದ ಈ ಸ್ಫೋಟದಲ್ಲಿ ಆಟೋ ಚಾಲಕ ಕೂಡ ಗಂಭೀರವಾಗಿ ಗಾಯಗೊಂಡಿದ್ದ. ನಂತರ ಶಂಕಿತ ಉಗ್ರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರ ಎನ್‌ಐಎ ಅಧಿಕಾರಿಗಳು ಆತನ ಬಂಧನ ಮಾಡಿದ್ದರು.

ಎಪ್ರಿಲ್‌ 20,2024ರಂದು ಪ್ರಕರಣದ ಆರೋಪಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯವು ಪ್ರಶ್ನೆ ಮಾಡಿದಾಗ ಶಾರೀಕ್‌ ತಾನು ನಿರಪರಾಧಿ ಎಂದು ಹೇಳಿದ್ದ. ಆದರೆ 2025ರ ಡಿಸೆಂಬರ್‌ನಲ್ಲಿ ಕ್ರಿಮಿನಲ್‌ ಪ್ರೊಸಿಜರ್‌ ಕೋಡ್‌ ಸೆಕ್ಷನ್‌ 229 ಅಡಿಯಲ್ಲಿ ತಪ್ಪೊಪ್ಪಿಗೆ ಅರ್ಜಿ ಸಲ್ಲಿಸಿ ತನ್ನ ನಿಲುವು ಬದಲಿಸಿದ್ದ ಎಂದು ವರದಿಯಾಗಿದೆ.

ಈ ಹಿನ್ನೆಲೆಯಲ್ಲಿ ಕಳೆದ ಮಾರ್ಚ್‌ 26ರಂದು ನ್ಯಾಯಾಲಯವು ಈ ಅರ್ಜಿಯನ್ನು ಅಂಗೀಕಾರ ಮಾಡಿರುವ ಕುರಿತು ವರದಿಯಾಗಿದೆ.

ಅರ್ಜಿಯಲ್ಲಿ ಶಾರೀಕ್‌, ಕುಕ್ಕರ್‌ನಲ್ಲಿ ಐಇಡಿ ಇಟ್ಟು ಸ್ಫೋಟ ಮಾಡಿದ್ದೇನೆ. ನನಗೆ ಪಶ್ಚಾತ್ತಾಪವಾಗಿದೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾನೆ. ಮೂರು ತಿಂಗಳ ವಿಚಾರಣೆ ಬಳಿಕ ನ್ಯಾಯಾಲಯವು ಈ ಅರ್ಜಿಯನ್ನು ಮಾನ್ಯಗೊಳಿಸಿರುವ ಕುರಿತು ವರದಿಯಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share