Saturday, May 30, 2026
HomeStateಇನ್ನುಮುಂದೆ HSRP ಕಡ್ಡಾಯವಲ್ಲ?!

ಇನ್ನುಮುಂದೆ HSRP ಕಡ್ಡಾಯವಲ್ಲ?!

ಬೆಂಗಳೂರು: ರಾಜ್ಯ ಸರ್ಕಾರವು ವಾಹನ ಸವಾರರಿಗೆ ಮಹತ್ವದ ತೀರ್ಮಾನವನ್ನು ಪ್ರಕಟಿಸಿದ್ದು, ಇದುವರೆಗೆ ಕಡ್ಡಾಯ ಎಂದು ಹೇಳಲಾಗುತ್ತಿದ್ದ HSRP (ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್) ಅಳವಡಿಕೆ ಕುರಿತ ಆದೇಶವನ್ನು ಸರ್ಕಾರ ಹಿಂಪಡೆದಿದೆ ಎಂಬ ಮಾಹಿತಿ ಕೇಳಿಬರುತ್ತಿದೆ.

2019ರ ಏಪ್ರಿಲ್ 1ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಿ Karnataka Transport Department 2023ರ ಆಗಸ್ಟ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು. ಬಳಿಕ ಈ ನಿಯಮ ಪಾಲನೆಗೆ ಹಲವು ಬಾರಿ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿತ್ತು.

ಆದರೂ ರಾಜ್ಯದಲ್ಲಿ ಕೇವಲ ಶೇ. 29ರಷ್ಟು ವಾಹನ ಮಾಲೀಕರು ಮಾತ್ರ HSRP ನಂಬರ್ ಪ್ಲೇಟ್ ಅಳವಡಿಸಿಕೊಂಡಿದ್ದಾರೆ. ವಾಹನ ಸವಾರರಿಂದ ನಿರೀಕ್ಷಿತ ಮಟ್ಟದಲ್ಲಿ ಸ್ಪಂದನೆ ಸಿಗದ ಹಿನ್ನೆಲೆ, ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.

ಇದರ ನಡುವೆ ಈಗಾಗಲೇ ಆನ್‌ಲೈನ್ ಅಥವಾ RTO ಕಚೇರಿಗಳಲ್ಲಿ ಹಣ ಪಾವತಿಸಿ HSRP ನಂಬರ್ ಪ್ಲೇಟ್ ಅಳವಡಿಸಿಕೊಂಡಿರುವ ವಾಹನ ಸವಾರರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರದ ಈ ಕ್ರಮವು ತಮ್ಮ ಮೇಲೆ ಅನ್ಯಾಯವಾಗಿದೆ ಎಂಬ ಅಸಮಾಧಾನಗಳೂ ಹೊರಬಿದ್ದಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share