ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಸಮಾಜ ಸೇವಕಿ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷರಾದ ಅನುಪಮಾ ಎಲ್ ಆರ್ಯ ಅವರು ಸಮೀಪದ ಕೂಡಿಗೆಯ ವೃದ್ಧಾಶ್ರಮದಲ್ಲಿ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡರು.
ಈ ಸಂದರ್ಭದಲ್ಲಿ ವೃದ್ಧಾಶ್ರಮದ ಹಿರಿಯರ ಆಶೀರ್ವಾದ ಪಡೆದ ಅವರು, ಅಲ್ಲಿನ ನಿವಾಸಿಗಳಿಗೆ ಹಣ್ಣು ಹಂಪಲು ಹಾಗೂ ಆಹಾರ ಕಿಟ್ಗಳನ್ನು ವಿತರಿಸಿದರು. ಬಳಿಕ ತಮ್ಮ ಖರ್ಚಿನಲ್ಲಿ ಊಟದ ವ್ಯವಸ್ಥೆ ಮಾಡಿಸಿ, ಎಲ್ಲರಿಗೂ ಸತ್ಕಾರವಾಗಿ ಊಟ ಬಡಿಸಿದರು.
ಈ ವೇಳೆ ಮಾತನಾಡಿದ ಅನುಪಮಾ ಎಲ್ ಆರ್ಯ ಅವರು, “ಸಾರ್ವಜನಿಕರ ಹಿತಾಸಕ್ತಿ ಕಾಯುವ ಮೂಲಕ ಸಮಾಜ ಸೇವೆಯಲ್ಲಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಕೆಲವು ಮಂದಿ ನನ್ನ ಮೇಲೆ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದರೂ, ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಜನರ ಕಷ್ಟ-ಸುಖಗಳಿಗೆ ಸ್ಪಂದಿಸುವ ಮೂಲಕ ನಿರಂತರವಾಗಿ ಸೇವೆ ಸಲ್ಲಿಸುತ್ತೇನೆ. ಎಲ್ಲರ ಆಶೀರ್ವಾದ ನನ್ನ ಮೇಲೆ ಇರಲಿ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅನುಪಮಾ ಅಭಿಮಾನಿ ಬಳಗದ ನಿತಿನ್, ವಸಂತ, ಪಾಪಣ್ಣ, ಮಾದೇಶ, ಪುಂಡು, ಸಾಗರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.