Thursday, July 23, 2026
Join WhatsApp Group
HomeLocal Newsಅರಬೈಲ ಘಟ್ಟದಲ್ಲಿ ಹೊತ್ತಿ ಉರಿದ ಕಾರು

ಅರಬೈಲ ಘಟ್ಟದಲ್ಲಿ ಹೊತ್ತಿ ಉರಿದ ಕಾರು

ಯಲ್ಲಾಪುರ: ತಾಲೂಕಿನ ಅರಬೈಲ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ತಾಳಿಕುಂಬ್ರಿ ಬಸ್ ತಂಗುದಾಣದ ಸಮೀಪ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕಾರೊಂದು ಚಾಲಕ ಸಮೇತ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

Volkswagen ಕಂಪನಿಗೆ ಸೇರಿದ ಈ ಕಾರು ಹುಬ್ಬಳ್ಳಿಯಿಂದ ಅಂಕೋಲಾಕ್ಕೆ ಸಾಗುತ್ತಿತ್ತು ಎಂದು ತಿಳಿದುಬಂದಿದೆ. ಇದೇ ವೇಳೆ ಏಕಾಏಕಿ ಕಾರಿಗೆ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲೇ ವಾಹನ ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿದೆ.

ಘಟನೆಯ ತೀವ್ರತೆಗೆ ಕಾರಿನೊಳಗಿದ್ದ ಚಾಲಕನ ದೇಹವೂ ಗುರುತು ಸಿಗದ ಮಟ್ಟಿಗೆ ಸುಟ್ಟು ಹೋಗಿರುವುದು ತಿಳಿದುಬಂದಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ. ಬೆಂಕಿ ಹೇಗೆ ಹೊತ್ತಿಕೊಂಡಿತು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ತಾಂತ್ರಿಕ ದೋಷವೇ ಅಥವಾ ಬೇರೆ ಕಾರಣವೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share