Friday, July 24, 2026
Join WhatsApp Group
HomeLocal Newsಇಂದಿನಿಂದ ಮನೆಗಳ ಗಣತಿ ಕಾರ್ಯ: ಡಿಸಿ

ಇಂದಿನಿಂದ ಮನೆಗಳ ಗಣತಿ ಕಾರ್ಯ: ಡಿಸಿ

ಕಾರವಾರ: ಭಾರತೀಯ ಜನಗಣತಿ ಪ್ರಯುಕ್ತ ಮನೆಗಳ ಪಟ್ಟಿ ಮತ್ತು ಮನೆಗಳ ಗಣತಿ ಕಾರ್ಯವು ಏ. 16ರಿಂದ ಮೇ. 15ರವರೆಗೆ ನಡೆಯಲಿದೆ. ಸದರಿ ಕಾರ್ಯಕ್ಕೆ ಗಣತಿದಾರರು ಮನೆ-ಮನೆಗೆ ಭೇಟಿ ನೀಡಲಿದ್ದಾರೆ.

 ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 3216 ಮನೆಯ ಪಟ್ಟಿಯ ಬ್ಲಾಕ್‌ಗಳಿದ್ದು, ಈ ಬ್ಲಾಕ್‌ಗಳಿಗೆ 3255 ಗಣತಿದಾರರು ಹಾಗೂ 586 ಮೇಲ್ವಿಚಾರಕರಿಗೆ ಗಣತಿ ಕಾರ್ಯವನ್ನು ನಿರ್ವಹಿಸಿಲು ನೇಮಕ ಮಾಡಲಾಗಿದೆ.

ಸದ್ರಿಯವರು ಮನೆಗಳಿಗೆ ಭೇಟಿ ನೀಡಿದಾಗ ಸಾರ್ವಜನಿಕರು ಮಾಹಿತಿಯನ್ನುಯ ಒದಗಿಸಿ ಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ತಿಳಿಸಿದೆ. ಸಾರ್ವಜನಿಕರು ನೀಡಿದ ಮಾಹಿತಿಯು ಸುರಕ್ಷಿತ ಹಾಗೂ ಗೌಪ್ಯವಾಗಿ ಉಳಿಯುತ್ತದೆ.

ಈ ಗಣತಿಯ ಮಾಹಿತಿಯನ್ನು ರಾಷ್ಟ್ರ ನಿರ್ಮಾಣಕ್ಕಾಗಿ ಮಾತ್ರ ಬಳಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಪ್ರಧಾನ ಗಣತಿ ಅಧಿಕಾರಿ ಕೆ. ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share