Friday, July 24, 2026
Join WhatsApp Group
HomeStateಯೋಗೇಶ್ ಗೌಡ ಹ*ತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ದೋಷಿ

ಯೋಗೇಶ್ ಗೌಡ ಹ*ತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ: ಜಿಲ್ಲೆಯ ಬಹುಚರ್ಚಿತ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಸುಮಾರು ಹತ್ತು ವರ್ಷಗಳ ವಿಚಾರಣೆ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ.

2016ರ ಜೂನ್ ತಿಂಗಳಲ್ಲಿ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಪ್ರಕರಣವು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಬಳಿಕ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.

ವಿಚಾರಣೆಯ ಅವಧಿಯಲ್ಲಿ 100ಕ್ಕೂ ಹೆಚ್ಚು ಸಾಕ್ಷಿದಾರರ ಹೇಳಿಕೆಗಳನ್ನು ದಾಖಲಿಸಲಾಗಿತ್ತು. ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿ ಹಲವು ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿದ್ದು, ಕೆಲವರಿಗೆ ಅನುಮಾನ ಲಾಭದ ಆಧಾರದಲ್ಲಿ ವಿಮುಕ್ತಿ ನೀಡಿದೆ. ತೀರ್ಪಿನ ಬಳಿಕ ನ್ಯಾಯಾಲಯವೇ ಸಿಬಿಐ ಅಧಿಕಾರಿಗಳಿಗೆ ದೋಷಿಗಳನ್ನು ವಶಕ್ಕೆ ಪಡೆಯುವಂತೆ ಸೂಚಿಸಿದೆ.

ಇಷ್ಟು ದಿನ ಜಾಮೀನಿನ ಮೇಲೆ ಹೊರಗಿದ್ದ ವಿನಯ್ ಕುಲಕರ್ಣಿ ಇದೀಗ ಮತ್ತೆ ಜೈಲು ಸೇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಶಿಕ್ಷೆಯ ಪ್ರಮಾಣದ ಕುರಿತು ಏಪ್ರಿಲ್ 16ರಂದು ವಾದ ಮಂಡನೆ ನಡೆಯಲಿದ್ದು, ಬಳಿಕ ಅಂತಿಮ ಶಿಕ್ಷೆಯನ್ನು ನ್ಯಾಯಾಲಯ ಪ್ರಕಟಿಸಲಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share