Friday, July 24, 2026
Join WhatsApp Group
HomeLocal Newsಫ್ಯಾಷನ್‌ ಡಿಸೈನರ್‌ ಆಗಬೇಕಾ, ಇಲ್ಲಿದೆ ತರಬೇತಿ!

ಫ್ಯಾಷನ್‌ ಡಿಸೈನರ್‌ ಆಗಬೇಕಾ, ಇಲ್ಲಿದೆ ತರಬೇತಿ!

ಕಾರವಾರ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್ ಕಾರವಾರ, ಹಾಗೂ ಕ್ರಿಯೇಟಿವ್ ಕಂಪ್ಯೂಟರ್ ಇನಸ್ಟಿಟ್ಯೂಟ್ ಯಲ್ಲಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ “30 ದಿನಗಳ ಫ್ಯಾಷನ್ ಡಿಸೈನಿಂಗ್ ಮತ್ತು ಅಪೆರಲ್ ಮೆಕಿಂಗ್ ವಿಷಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ”ಯನ್ನು ಉಚಿತವಾಗಿ ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ಏ. 28ರಿಂದ ಮೇ. 26ರವರೆಗೆ ಹಮ್ಮಿಕೊಳ್ಳಲಾಗಿದೆ.

ಸದರಿ ತರಬೇತಿಯಲ್ಲಿ 18 ರಿಂದ 35 ವರ್ಷ ವಯೋಮಿತಿಯ, 10ನೇ ತರಗತಿ ಪಾಸಾದ ಪರಿಶಿಷ್ಟ ಪಂಗಡದ ಮಹಿಳಾ ಸ್ವ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಬಹುದಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸ್ವ ಉದ್ಯೋಗ ಆಸಕ್ತಿಯುಳ್ಳ 30 ಮಹಿಳೆಯರು ಈ ತರಬೇತಿಗೆ ಮುಂಗಡವಾಗಿ ತಮ್ಮ ಹೆಸರನ್ನು ಸಂಸ್ಥೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿಯ ಜೊತೆಗೆ 3 ಪಾಸ್ ಪೋರ್ಟ್ ಅಳತೆಯ ಫೋಟೋ, ಎಸ್‌ಎಸ್‌ಎಲ್‌ಸಿ ಮಾರ್ಕ್ಸ್ ಕಾರ್ಡ್, ಬಯೋಡಾಟಾ, ಆಧಾರ್ ಕಾರ್ಡ್ ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಪ್ರತಿಯನ್ನು ಕ್ರಿಯೇಟಿವ್ ಕಂಪ್ಯೂಟರ್‌ ಇನಸ್ಟಿಟ್ಯೂಟ್, ಬಸವೇಶ್ವರ ಸರ್ಕಲ್, ಯಲ್ಲಾಪುರ ಇಲ್ಲಿ ಕಡ್ಡಾಯವಾಗಿ ಸಲ್ಲಿಸಿದ್ದಲ್ಲಿ skillmission.karnataka.gov.in ಸೈಟ್‌ನಲ್ಲಿ ನೋಂದಾಯಿಸಿ ಎಸ್‌ಎಎಫ್ ನಂಬರನ್ನು ನಮ್ಮ ಸಂಸ್ಥೆಯಿಂದ ಪಡೆಯಲಾಗುವುದು. ಅಗತ್ಯ ದಾಖಲೆಗಳನ್ನು ಸಲ್ಲಿಸಲು ಏ.22 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಲು ಬಯಸುವವರು ಉಪ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಬಂಗಾರಪ್ಪ ನಗರ, ಶಿರವಾಡ, ಕಾರವಾರ ದೂರವಾಣಿ ಸಂಖ್ಯೆ- ತರಬೇತುದಾರರು, ಸಿಡಾಕ್, ಕಾರವಾರ-8105224080, ಶಾಲಿನಿ ಮುರಡೇಶ್ವರ-9538833979 ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಕಾರವಾರ ಸಿಡಾಕ್ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share