Friday, July 24, 2026
Join WhatsApp Group
HomeLocal Newsಉದ್ಯೋಗ ಖಾತ್ರಿಯಲ್ಲಿ ಶಾಲಾಭಿವೃದ್ಧಿ ಭಾಗ್ಯ!

ಉದ್ಯೋಗ ಖಾತ್ರಿಯಲ್ಲಿ ಶಾಲಾಭಿವೃದ್ಧಿ ಭಾಗ್ಯ!

ಸಿದ್ದಾಪುರ: ಶಾಲೆಗಳ ಸುರಕ್ಷತೆ ದೃಷ್ಟಿಯಿಂದ ಹಾಗೂ ಶಾಲಾ ಆವರಣದಲ್ಲಿನ ಸ್ವತ್ತುಗಳನ್ನು ಸಂರಕ್ಷಿಸಲು ಕಾಂಪೌಂಡ್ ನಿರ್ಮಾಣ ಅತ್ಯಗತ್ಯವಾಗಿದೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಅನುದಾನದ ಕೊರತೆಯಿಂದಾಗಿ ಅದೆಷ್ಟೋ ಶಾಲೆಗಳಿಗೆ ಕಾಂಪೌಂಡ್ ಭಾಗ್ಯವೇ ಇಲ್ಲದಂತಾಗಿದೆ. ಹೀಗಾಗಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಾಮುಖ್ಯತೆ ನೀಡಿ ಶಾಲೆಗೆ ಭದ್ರತೆ ಒದಗಿಸಲು ಅವಕಾಶ ಕಲ್ಪಿಸಲಾಗಿದೆ.

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಶಾಲೆಗೆ ಅಗತ್ಯವಿರುವ ಶೌಚಾಲಯ, ಆಟದ ಮೈದಾನ, ಅಂಗನವಾಡಿ ಕಟ್ಟಡ, ಮಳೆ ನೀರಿನ ಕೊಯ್ಲು, ಕಾಂಪೌಂಡ್, ಅಡುಗೆ ಕೋಣೆ, ಭೋಜನಾಲಯದಂತಹ ಅನೇಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಇದರಿಂದ ಗ್ರಾಮೀಣ ಶಾಲೆಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳು ಒಂದೊಂದಾಗಿ ಪೂರೈಸಲ್ಪಡುತ್ತಿವೆ.

ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಗ್ರಾಮ ಪಂಚಾಯತ್ನ ಮುಠ್ಠಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲೆಗೆ ಸುಭದ್ರ ಕಾಂಪೌಂಡ್ ನಿರ್ಮಿಸಲಾಗಿದೆ. ಇದಕ್ಕೆ ಪೂರಕವಾಗಿ ಸ್ಥಳೀಯರ ಸಹಕಾರದೊಂದಿಗೆ ಈ ಕಾಂಪೌಂಡ್ ಹಸೆ ಚಿತ್ತಾರಗಳಿಂದ ಕಂಗೊಳಿಸುತ್ತಿದ್ದು, ದಾರಿಹೋಕರ ಕಣ್ಮನ ಸೆಳೆಯುತ್ತಿದೆ. ಅಂದಾಜು ಮೊತ್ತ 3 ಲಕ್ಷ 52 ಸಾವಿರ ರೂ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾದ ಈ ಕಾಮಗಾರಿಯು ಶಾಲೆಗೆ ಭದ್ರತೆ ಕಲ್ಪಿಸಿದೆ.

ಈ ಶಾಲೆಯಲ್ಲಿ ದಾಸೋಹ ಕೊಠಡಿಯೂ ಶಿಥಿಲಗೊಂಡು ಇನ್ನೇನು ಬೀಳುವುದರಲ್ಲಿತ್ತು. ಇದನ್ನರಿತ ಗ್ರಾಮ ಪಂಚಾಯತ್ ವತಿಯಿಂದ ಸುಮಾರು 7ಲಕ್ಷ ವೆಚ್ಚದಲ್ಲಿ ಸುಸಜ್ಜಿತವಾದ ಅಡುಗೆ ಕೋಣೆ ನಿರ್ಮಿಸಲಾಗಿದ್ದು, ಶಾಲೆಯ ದಾಸೋಹ ತಯಾರಿಕೆಗೆ ಅನುಕೂಲವಾಗಿದೆ.

ತಾಲೂಕಿನಲ್ಲಿ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿಯೂ ಶಾಲಾ ಅಭಿವೃದ್ಧಿಗೆ ನರೇಗಾ ಯೋಜನೆಯಡಿ ಬಹುಮುಖ್ಯವಾಗಿ ಪರಿಗಣಿಸಲಾಗಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅನುಕೂಲ ಕಲ್ಪಿಸಲಾಗಿದೆ. ಇದರಿಂದ ಶಾಲೆಗಳು ಹೊಸತನ ಕಂಡುಕೊಳ್ಳುತ್ತಿವೆ. ಜೊತೆಗೆ ಮಕ್ಕಳ ಉತ್ಸಾಹಕ್ಕೂ ಕಾರಣವಾಗಿವೆ ಎನ್ನುತ್ತಾರೆ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ದೇವರಾಜ್ ಹಿತ್ತಲಕೊಪ್ಪ .

ನಮ್ಮ ಗ್ರಾಮ ಪಂಚಾಯತ್‌ನಲ್ಲಿ ಶಾಲೆಗಳಿಗೆ ಅನುಕೂಲವಾದ ಕಾಮಗಾರಿಗಳಿಗೆ ಮೊದಲ ಆದ್ಯತೆ ನೀಡುತ್ತಿದ್ದೇವೆ. ಜೊತೆಗೆ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಯ ಆಶಯದೊಂದಿಗೆ ಸ್ಥಳೀಯರ ಸಹಕಾರದೊಂದಿಗೆ ನರೇಗಾ ಯೋಜನೆಯು ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ನಾಯ್ಕ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share