Friday, July 24, 2026
Join WhatsApp Group
HomeCrimeಬೀಚ್‌ನಲ್ಲಿ ಗಾಂ*ಜಾ ಸೇವನೆ; ಯುವಕ ಪೊಲೀಸ್ ವಶಕ್ಕೆ

ಬೀಚ್‌ನಲ್ಲಿ ಗಾಂ*ಜಾ ಸೇವನೆ; ಯುವಕ ಪೊಲೀಸ್ ವಶಕ್ಕೆ

ಭಟ್ಕಳ: ಮುರ್ಡೇಶ್ವರದ ಮಾತೋಬಾರ ದೇವಸ್ಥಾನ ಸಮೀಪದ ಬೀಚ್‌ನಲ್ಲಿ ಸಾರ್ವಜನಿಕವಾಗಿ ಗಾಂ*ಜಾ ಸೇವನೆ ಮಾಡುತ್ತಿದ್ದ ಯುವಕನನ್ನು ಮುರ್ಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತನನ್ನು ಮಾವಳ್ಳಿ-01ರ ಹಿರೇದೊಮ್ಮಿ ನಿವಾಸಿ ಮೊಹಮ್ಮದ್ ಕೈಫ್ (20) ಎಂದು ಗುರುತಿಸಲಾಗಿದೆ.

ಮುರ್ಡೇಶ್ವರ ಪೊಲೀಸ್ ಠಾಣೆಯ ಪಿಎಸ್‌ಐ ಹಣಮಂತ ಬಿರಾದಾರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿತನನ್ನು ವಶಕ್ಕೆ ಪಡೆಯಲಾಗಿದೆ.

ಬಳಿಕ ಆರೋಪಿತನನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿಯಲ್ಲಿ ಗಾಂ*ಜಾ ಸೇವನೆ ಪಾಸಿಟಿವ್ ಎಂದು ದೃಢಪಟ್ಟಿದೆ.

ಈ ಸಂಬಂಧ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share