Friday, July 24, 2026
Join WhatsApp Group
HomeLocal Newsಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ತೆಗೆಸಿದ ಘಟನೆ: ಶಾಸಕ ಶಿವರಾಮ ಹೆಬ್ಬಾರ್ ಖಂಡನೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ತೆಗೆಸಿದ ಘಟನೆ: ಶಾಸಕ ಶಿವರಾಮ ಹೆಬ್ಬಾರ್ ಖಂಡನೆ

ಯಲ್ಲಾಪುರ: ಬೆಂಗಳೂರು ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಕೆಲವು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಯಲ್ಲಾಪುರ–ಮುಂಡಗೋಡ–ಬನವಾಸಿ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್, ಇದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಘಟನೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಮ್ಮ ದೇಶದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸುವ ಹಕ್ಕನ್ನು ನೀಡಿದೆ. ಪರೀಕ್ಷಾ ನಿಯಮಗಳ ಹೆಸರಿನಲ್ಲಿ ಯಾವುದೇ ವಿದ್ಯಾರ್ಥಿಯ ಧಾರ್ಮಿಕ ಗುರುತಿಗೆ ಧಕ್ಕೆ ತರುವುದು ಖಂಡನೀಯ ಎಂದು ಅವರು ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಭದ್ರತೆ ಮುಖ್ಯವಾದರೂ, ಅದು ವಿದ್ಯಾರ್ಥಿಗಳ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಸಂಸ್ಕೃತಿಗೆ ಧಕ್ಕೆಯಾಗಬಾರದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಆಗ್ರಹಿಸಿದ್ದಾರೆ.

ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸಿ, ಎಲ್ಲ ವಿದ್ಯಾರ್ಥಿಗಳಿಗೂ ಸಮಾನ ಗೌರವ ಮತ್ತು ನ್ಯಾಯ ದೊರಕುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಮನೋಭಾವನೆಗಳಿಗೆ ಧಕ್ಕೆ ಆಗದ ರೀತಿಯಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ನಡೆಸುವುದು ಅತ್ಯಾವಶ್ಯಕ ಎಂದು ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share