Friday, July 24, 2026
Join WhatsApp Group
HomeAgricultureಪಿಎಂ ಕಿಸಾನ್; ದಾಖಲೆ ಅಪ್ಡೇಟ್ ಮಾಡದಿದ್ದರೆ ಹಣ ಬರಲ್ಲ!

ಪಿಎಂ ಕಿಸಾನ್; ದಾಖಲೆ ಅಪ್ಡೇಟ್ ಮಾಡದಿದ್ದರೆ ಹಣ ಬರಲ್ಲ!

ನವದೆಹಲಿ: ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಎಚ್ಚರಿಕೆ ನೀಡಲಾಗಿದೆ. ಏಪ್ರಿಲ್ 30ರೊಳಗೆ ಅಗತ್ಯ ದಾಖಲೆಗಳನ್ನು ಅಪ್ಡೇಟ್ ಮಾಡದಿದ್ದರೆ ಮುಂದಿನ ಕಂತಿನ ಹಣ ನಿಲ್ಲುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಯೋಜನೆಯಡಿ ವರ್ಷಕ್ಕೆ ₹6,000 ಮೊತ್ತವನ್ನು ಮೂರು ಕಂತುಗಳಲ್ಲಿ, ಪ್ರತಿ ನಾಲ್ಕು ತಿಂಗಳಿಗೆ ₹2,000ರಂತೆ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಇತ್ತೀಚೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 22ನೇ ಕಂತಿನ ಹಣ ಬಿಡುಗಡೆ ಮಾಡಿದ್ದು, ಬಹುತೇಕ ರೈತರಿಗೆ ಹಣ jameyaa.ಆದರೆ, ಕೆಲವು ರೈತರ ಖಾತೆಗಳಿಗೆ ಇನ್ನೂ ಹಣ ಜಮೆಯಾಗಿಲ್ಲ.

ಇದಕ್ಕೆ ಪ್ರಮುಖ ಕಾರಣ ದಾಖಲೆಗಳ ಅಪೂರ್ಣತೆ ಹಾಗೂ eKYC ಪ್ರಕ್ರಿಯೆ ಪೂರ್ಣಗೊಳ್ಳದಿರುವುದು ಎಂದು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ರೈತರು ತಮ್ಮ ವಿವರಗಳನ್ನು ತಕ್ಷಣವೇ ಸರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ರೈತರು ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ “Update Missing Information” ಆಯ್ಕೆಯ ಮೂಲಕ ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾ ನಮೂದಿಸಿ ತಮ್ಮ ವಿವರಗಳನ್ನು ಪರಿಶೀಲಿಸಬಹುದು. ಅಗತ್ಯವಿದ್ದರೆ ಹೆಸರು, ವಿಳಾಸ, ಬ್ಯಾಂಕ್ ಖಾತೆ ಮಾಹಿತಿಯನ್ನು ಸರಿಪಡಿಸಿ ಸಂಬಂಧಿತ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಲ್ಲಿಸಬಹುದು.

eKYC ಹಾಗೂ ರೈತ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವುದು ಅತ್ಯಂತ ಮುಖ್ಯವಾಗಿದ್ದು, ಇದನ್ನು ನಿರ್ಲಕ್ಷಿಸಿದರೆ ಹಣ ತಾತ್ಕಾಲಿಕವಾಗಿ ನಿಲ್ಲುವ ಸಾಧ್ಯತೆ ಇದೆ. ಕೆಲವು ಸಂದರ್ಭಗಳಲ್ಲಿ ಹಿಂದಿನ ಬಾಕಿ ಕಂತುಗಳೂ ತಡವಾಗಿ ಜಮಾ ಆಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಏಪ್ರಿಲ್ 30ರೊಳಗೆ ವಿವರಗಳನ್ನು ಅಪ್ಡೇಟ್ ಮಾಡದಿದ್ದರೆ ಪಿಎಂ ಕಿಸಾನ್ ಪೋರ್ಟಲ್‌ನಿಂದ ಹೆಸರು ತೆಗೆದುಹಾಕುವ ಸಾಧ್ಯತೆಯೂ ಇದೆ.

ಆದ್ದರಿಂದ ಹಣ ಜಮವಾಗದ ರೈತರು ತಕ್ಷಣವೇ ತಮ್ಮ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಮಾಹಿತಿಯನ್ನು ಅಪ್ಡೇಟ್ ಮಾಡಿಕೊಳ್ಳುವುದು ಅಗತ್ಯ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share