Saturday, May 30, 2026
HomeLocal Newsಕೊಲೆ ಪ್ರಕರಣ: 33 ವರ್ಷಗಳ ಬಳಿಕ ಶಿಕ್ಷೆ!

ಕೊಲೆ ಪ್ರಕರಣ: 33 ವರ್ಷಗಳ ಬಳಿಕ ಶಿಕ್ಷೆ!

ಕಾರವಾರ: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯವು ಆರೋಪಿಗೆ 5 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 7 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ.

ಚಿತ್ತಾಕುಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1993ರಲ್ಲಿ ನಡೆದ ಈ ಪ್ರಕರಣದಲ್ಲಿ, ಪ್ರಶಾಂತ ಎಂಬ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಆರೋಪದ ಮೇಲೆ ದೀಲಿಪ ಶಾಂತಾ ತಳೇಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಅಂದಿನ ತನಿಖಾಧಿಕಾರಿ ಡಿ.ಕೆ. ನಿಕ್ಕಮ್ ಅವರು ಪ್ರಕರಣದ ತನಿಖೆ ನಡೆಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ವಿಚಾರಣೆಯ ನಡುವೆ ಆರೋಪಿತನು ತಲೆಮರೆಸಿಕೊಂಡಿದ್ದರಿಂದ ಪ್ರಕರಣ ಎಲ್‌ಪಿಸಿ ಆಗಿತ್ತು. ನಂತರ 2021ರಲ್ಲಿ ಪಿಎಸ್‌ಐ ಪ್ರವೀಣ ಕುಮಾರ ನೇತೃತ್ವದ ತಂಡ ಆರೋಪಿಯನ್ನು ಪತ್ತೆಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಏಪ್ರಿಲ್ 28, 2026ರಂದು ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ ಹಾಗೂ 7 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಸುನೀತಾ ನಾಗೇಕರ ವಾದ ಮಂಡಿಸಿದ್ದರು. ಪ್ರಕರಣದ ತನಿಖೆ ಹಾಗೂ ನ್ಯಾಯಾಲಯದ ಕಾರ್ಯವೈಖರಿಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯವರನ್ನು ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಭಿನಂದಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share