Monday, September 7, 2026
Join WhatsApp Group
HomeLocal Newsಕಾಂಗ್ರೆಸ್ ಗೆಲುವಿಗೆ ಸಂಭ್ರಮಾಚರಣೆ

ಕಾಂಗ್ರೆಸ್ ಗೆಲುವಿಗೆ ಸಂಭ್ರಮಾಚರಣೆ

ಯಲ್ಲಾಪುರ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟ ಉಪಚುನಾವಣೆಗಳ ಜೊತೆಗೆ ಕೇರಳ ರಾಜ್ಯದ ಚುನಾವಣಾ ಫಲಿತಾಂಶಗಳಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿಕೊಂಡು ವಿಜಯೋತ್ಸವ ಆಚರಿಸಿದರು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್. ಭಟ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿಜಯ ಮಿರಾಶಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ. ಭಟ್, ಡಾ. ರವಿ ಭಟ್ ಬರಗದ್ದೆ, ನಗರ ಘಟಕಾಧ್ಯಕ್ಷ ಸತೀಶ ನಾಯ್ಕ, ಹಿಂದುಳಿದ ವರ್ಗಗಳ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಪ್ರೇಮಾನಂದ ನಾಯ್ಕ, ಪ.ಪಂ ಮಾಜಿ ಅಧ್ಯಕ್ಷರಾದ ಶೀರಿಷ್ ಪ್ರಭು, ಎಮ್.ಡಿ. ಮುಲ್ಲಾ, ತಾಲೂಕು ಗ್ಯಾರಂಟಿ ಅಧ್ಯಕ್ಷ ಉಲ್ಲಾಸ್ ಶಾನಭಾಗ, ಮಹಿಳಾ ಕಾಂಗ್ರೆಸ್‌ನ ಪೂಜಾ ನೇತ್ರಕರ್, ಮುಷರತ್ ಶೇಖ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share