Monday, September 7, 2026
Join WhatsApp Group
HomeLocal Newsಅರಬೈಲ್ ಘಟ್ಟದಲ್ಲಿ ಟ್ಯಾಂಕರ್ ಪಲ್ಟಿ: ಚಾಲಕ ದುರ್ಮರಣ

ಅರಬೈಲ್ ಘಟ್ಟದಲ್ಲಿ ಟ್ಯಾಂಕರ್ ಪಲ್ಟಿ: ಚಾಲಕ ದುರ್ಮರಣ

ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದಲ್ಲಿ ಸಂಭವಿಸಿದ ಟ್ಯಾಂಕರ್ ಅಪಘಾತದಲ್ಲಿ ಚಾಲಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

ತೆಲಂಗಾಣ ರಾಜ್ಯದ ಜೋಗಲಾಂಬಾ ಗದ್ವಾಲ ಜಿಲ್ಲೆಯ ಪೈಪಾಡು ಗ್ರಾಮದ ವಡ್ಲ ಆಂಜನೇಯಲು (43) ಮೃತ ಚಾಲಕ. ಮೇ 4ರಂದು ಆಂಧ್ರ ಪ್ರದೇಶದ ಕರುನೂಲ್‌ನ ಖಾಸಗಿ ಕಂಪನಿಯಿಂದ ಹೈಡ್ರೋಕ್ಲೋರಿಕ್ ಆಸಿಡ್ ಸಾಗಣೆ ಮಾಡಿಕೊಂಡು ಟ್ಯಾಂಕರ್‌ನಲ್ಲಿ ಯಲ್ಲಾಪುರ ಮಾರ್ಗವಾಗಿ ಅಂಕೋಲಾಕ್ಕೆ ತೆರಳುತ್ತಿದ್ದ.

ಮೇ 5ರಂದು ರಾತ್ರಿ ಸುಮಾರು 11 ಗಂಟೆಯ ಸುಮಾರಿಗೆ ಅರಬೈಲ್ ಘಟ್ಟದ ತಿರುವಿನಲ್ಲಿ ಟ್ಯಾಂಕರ್ ಅನ್ನು ಅತೀವೇಗ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡುತ್ತಿದ್ದ ಪರಿಣಾಮ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share