Saturday, May 30, 2026
HomeLocal Newsಶಿರಸಿ-ಹಾವೇರಿ ಹೆದ್ದಾರಿಯಲ್ಲಿ ಏರಿದ ಕಾವು

ಶಿರಸಿ-ಹಾವೇರಿ ಹೆದ್ದಾರಿಯಲ್ಲಿ ಏರಿದ ಕಾವು

ರಸ್ತೆ ದುರಸ್ತಿ ಆಗ್ರಹಿಸಿ ಬಿಸಲಕೊಪ್ಪದಲ್ಲಿ ಧರಣಿ

ಶಿರಸಿ: ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿಯನ್ನು ಶೀಘ್ರವೇ ಸರಿಪಡಿಸುವಂತೆ ಆಗ್ರಹಿಸಿ ಬಿಸಲಕೊಪ್ಪದಲ್ಲಿ ಸಾರ್ವಜನಿಕರ ಧರಣಿ ಮುಂದುವರಿದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ಹದಗೆಟ್ಟ ಪರಿಣಾಮ ನಿರಂತರ ಅಪಘಾತಗಳು ಸಂಭವಿಸುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನಾ ಸ್ಥಳಕ್ಕೆ ಎನ್‌ಎಚ್‌ಎಐ ಪ್ರಾಜೆಕ್ಟ್ ಡೈರೆಕ್ಟರ್ ಶಿವಕುಮಾರ್ ಹಾಗೂ ಶಿರಸಿ ಉಪವಿಭಾಗಾಧಿಕಾರಿ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು. ಈ ವೇಳೆ ಅಧಿಕಾರಿಗಳನ್ನು ಪ್ರತಿಭಟನಾಕಾರರು ತೀವ್ರ ತರಾಟೆಗೆ ತೆಗೆದುಕೊಂಡರು.

ಪ್ರತಿಭಟನಾ ಸ್ಥಳದಲ್ಲಿ ರಸ್ತೆ ಸಮಸ್ಯೆಯಿಂದ ಮೃತಪಟ್ಟವರ ಶ್ರದ್ಧಾಂಜಲಿ ಫೋಟೋಗಳನ್ನು ತೆರವುಗೊಳಿಸುವಂತೆ ಎನ್‌ಎಚ್‌ಎಐ ಅಧಿಕಾರಿಗಳು ಮನವಿ ಮಾಡಿದರು ಎನ್ನಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪ್ರತಿಭಟನೆ ಮುಂದುವರಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share