Ad
Ad
Ad
Home Crime ಪೊಲೀಸರ ದಾಳಿ; ಗಾಂ*ಜಾ ಪೆಡ್ಲರ್‌ ವಶಕ್ಕೆ

ಪೊಲೀಸರ ದಾಳಿ; ಗಾಂ*ಜಾ ಪೆಡ್ಲರ್‌ ವಶಕ್ಕೆ

0
30

ಹಳಿಯಾಳ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಹಳಿಯಾಳ ಪೊಲೀಸರು ಬಂಧಿಸಿ, 178 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಹಳಿಯಾಳ ಪೊಲೀಸ್ ಠಾಣಾ ವ್ಯಾಪ್ತಿಯ ದೇಶಪಾಂಡೆ ನಗರದ ಇಂಡಸ್ಟ್ರಿಯಲ್ ಏರಿಯಾದ ಪ್ರೆಸ್ಟೀಜ್ ಬುಕ್ ಹೌಸ್ ಮುಂಭಾಗದ ರಸ್ತೆಯಲ್ಲಿ ಮಹಮ್ಮದ್ ಜಬೀವುಲ್ಲಾ (ಚೌವಾಣ ಪ್ಲಾಟ್, ಹಳಿಯಾಳ) ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆ, ಪೊಲೀಸರು ಪಂಚರ ಸಮ್ಮುಖದಲ್ಲಿ ದಾಳಿ ನಡೆಸಿದರು.

ದಾಳಿಯ ವೇಳೆ ಆರೋಪಿತನನ್ನು ವಶಕ್ಕೆ ಪಡೆದು, ಆತನಿಂದ ಸುಮಾರು 178 ಗ್ರಾಂ ಒಣಗಿದ ಗಾಂಜಾ, ಹಳದಿ ಬಣ್ಣದ ಪಾಲಿಥಿನ್ ಚೀಲ ಹಾಗೂ 200 ರೂ ನಗದು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾದ ಮೌಲ್ಯ ಸುಮಾರು 15 ಸಾವಿರ ರೂ ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತನನ್ನು ಬಂಧಿಸಲಾಗಿದೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್.ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ., ದಾಂಡೇಲಿ ಪೊಲೀಸ್ ಉಪಾಧೀಕ್ಷಕ ಶಿವಾನಂದ ಮದರಕಂಡಿ ಹಾಗೂ ಹಳಿಯಾಳ ವೃತ್ತ ನಿರೀಕ್ಷಕ ಜಯಪಾಲ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.

ಈ ಕಾರ್ಯಾಚರಣೆಯಲ್ಲಿ ಪಿಎಸ್‌ಐ ಬಸವರಾಜ ಮಬನೂರ, ಕೃಷ್ಣಗೌಡ ಅರಕೇರಿ ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಯಶಸ್ವಿ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡವನ್ನು ಜಿಲ್ಲಾ ಪೊಲೀಸ್ ಅಧಿಕಾರಿಗಳು ಅಭಿನಂದಿಸಿದ್ದಾರೆ.

Previous articleರಾಜ್ಯಮಟ್ಟದ ವಿಜ್ಞಾನ ಶಿಕ್ಷಕರ ಸಂಘದ ರಚನೆ
Next articleಹೆಸ್ಕಾಂ: ನಿಮ್ಮ ಹಣ ನಿಮಗೇ ವಾಪಸ್!
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!