Saturday, May 30, 2026
HomeCrimeಅಂಕೋಲಾದ ರೌಡಿಶೀಟರ್‌ 6 ತಿಂಗಳು ಗಡಿಪಾರು

ಅಂಕೋಲಾದ ರೌಡಿಶೀಟರ್‌ 6 ತಿಂಗಳು ಗಡಿಪಾರು

ಅಂಕೋಲಾ: ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರಂತರವಾಗಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ.

ಅಂಕೋಲಾ ತಾಲೂಕಿನ ಕಸಬ ಕೇಣಿ ನಿವಾಸಿಯಾಗಿರುವ ಶ್ಯಾಮ್ @ ಶ್ಯಾಮಸುಂದರ ಗೋಪಿನಾಥ ಭಂಟ್ (41) ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು. 2011ರಿಂದ 2025ರವರೆಗೆ ಒಟ್ಟು 10 ಪ್ರಕರಣಗಳು ದಾಖಲಾಗಿದ್ದು, ಈತನ ಚಟುವಟಿಕೆಗಳ ಮೇಲೆ ಪೊಲೀಸ್ ಇಲಾಖೆ ನಿಗಾ ವಹಿಸಿತ್ತು.

ಆದರೂ ಸಹ ಕಾನೂನುಬಾಹಿರ ಚಟುವಟಿಕೆಗಳನ್ನು ಮುಂದುವರಿಸುತ್ತಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಅಂಕೋಲಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಗಡಿಪಾರು ಕ್ರಮಕ್ಕೆ ಸಂಬಂಧಿಸಿದಂತೆ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ವಿವರವಾದ ಪ್ರಸ್ತಾವನೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಅಭಿಯೋಜನೆ ಮತ್ತು ಪ್ರತಿವಾದಿಗಳ ವಾದಗಳನ್ನು ಆಲಿಸಿದ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು, ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಗಡಿಪಾರು ಕ್ರಮ ಅಗತ್ಯವೆಂದು ತೀರ್ಮಾನಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶ್ಯಾಮ್ @ ಶ್ಯಾಮಸುಂದರನನ್ನು ಉತ್ತರ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲಾ ನಗರ ವ್ಯಾಪ್ತಿಯ Chowk Police Station ಠಾಣಾ ವ್ಯಾಪ್ತಿಗೆ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ಆದೇಶಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share