Monday, September 7, 2026
Join WhatsApp Group
HomeLocal Newsಕಣಸಗಿರಿಯಲ್ಲಿ ಚಿರತೆ ಸೆರೆ: ವಾರದ ಆತಂಕಕ್ಕೆ ತೆರೆ

ಕಣಸಗಿರಿಯಲ್ಲಿ ಚಿರತೆ ಸೆರೆ: ವಾರದ ಆತಂಕಕ್ಕೆ ತೆರೆ

ಕಾರವಾರ: ನಗರದ ಕಣಸಗಿರಿ ಗ್ರಾಮದ ಜನವಸತಿ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಓಡಾಡುತ್ತಾ ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಚಿರತೆ ಕಾಣಿಸಿಕೊಂಡ ಬಳಿಕ ಗ್ರಾಮಸ್ಥರು ಆತಂಕದಲ್ಲಿ ದಿನ ಕಳೆಯುತ್ತಿದ್ದರು. ಸಾಕು ನಾಯಿಗಳ ಮೇಲೆ ದಾಳಿ ನಡೆಸಿದ್ದಲ್ಲದೇ, ಜಾನುವಾರುಗಳಿಗೂ ಹಾನಿ ಉಂಟುಮಾಡಿದ್ದರಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು.

ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿ, ಅದು ಸಂಚರಿಸುತ್ತಿದ್ದ ದಾರಿಯಲ್ಲಿ ಬೋನು ಅಳವಡಿಸಿತ್ತು. ಮಂಗಳವಾರ ಮುಂಜಾನೆ ಚಿರತೆ ಬೋನಿಗೆ ಬಿದ್ದಿದ್ದು, ಸುಮಾರು ನಾಲ್ಕು ವರ್ಷದ ಗಂಡು ಚಿರತೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೆರೆ ಸಿಕ್ಕ ಚಿರತೆಯನ್ನು ಸುರಕ್ಷಿತವಾಗಿ ದೂರದ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಚಿರತೆ ಸೆರೆ ಸಿಕ್ಕ ಸುದ್ದಿ ತಿಳಿಯುತ್ತಿದ್ದಂತೆಯೇ ಕನಸಗಿರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಸ್ಥಳಕ್ಕೆ ಆಗಮಿಸಿ ಬೋನಿನಲ್ಲಿದ್ದ ಚಿರತೆಯನ್ನು ವೀಕ್ಷಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share