Friday, July 24, 2026
Join WhatsApp Group
HomeCrimeಓಸಿ ಮಾವನ ವಿರುದ್ಧ ಪ್ರಕರಣ

ಓಸಿ ಮಾವನ ವಿರುದ್ಧ ಪ್ರಕರಣ

ಶಿರಸಿ: ನಗರದ ಸಹ್ಯಾದ್ರಿ ಕಾಲೋನಿ ರಸ್ತೆ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಓಸಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಹೊಸ ಮಾರುಕಟ್ಟೆ ಪೊಲೀಸರು ದಾಳಿ ನಡೆಸಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಲಂಡಕನಳ್ಳಿ ನಿವಾಸಿ ಮಂಜುನಾಥ ಎಂ (42) ಹಾಗೂ ವಿವೇಕಾನಂದ ನಗರ ನಿವಾಸಿ ರಾಘವೇಂದ್ರ ರಾಮಚಂದ್ರ ಶೆಟ್ಟಿ ಆರೋಪಿಗಳಾಗಿದ್ದಾರೆ.

ಮಂಜುನಾಥ ಸಾರ್ವಜನಿಕರಿಗೆ ಅದೃಷ್ಟ ಸಂಖ್ಯೆಗಳ ಆಟವೆಂದು ಹೇಳಿ ಹಣ ಪಂಥವಾಗಿ ಕಟ್ಟಿಸಿಕೊಂಡು ಓಸಿ ಮಟಕಾ ಜೂಜಾಟ ನಡೆಸುತ್ತಿದ್ದ ವೇಳೆ ಪೊಲೀಸರು ಪಂಚರು ಹಾಗೂ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಜೂಜಾಟದಿಂದ ಸಂಗ್ರಹಿಸಿದ್ದ 910 ರೂ ನಗದು, ಅಂಕೆ-ಸಂಖ್ಯೆ ಬರೆದ ಚೀಟಿ, ಖಾಲಿ ಚೀಟಿಗಳು ಹಾಗೂ ಬಾಲ್ ಪೆನ್ ವಶಪಡಿಸಿಕೊಳ್ಳಲಾಗಿದೆ. ಸಂಗ್ರಹವಾದ ಹಣವನ್ನು ರಾಘವೇಂದ್ರ ಶೆಟ್ಟಿಗೆ ನೀಡಲಾಗುತ್ತಿತ್ತು ಎಂಬ ಮಾಹಿತಿ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಹೊಸಮಾರುಕಟ್ಟೆ ಪೊಲೀಸ್ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share