Friday, July 24, 2026
Join WhatsApp Group
HomeStateಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ 8 ಕೋಟಿ ರೂ ಮೌಲ್ಯ!

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ 8 ಕೋಟಿ ರೂ ಮೌಲ್ಯ!

ಗದಗ: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ನಿರ್ಮಾಣದ ವೇಳೆ ಪತ್ತೆಯಾಗಿದ್ದ ಚಿನ್ನದ ನಿಧಿಗೆ ಇದೀಗ ಹೊಸ ತಿರುವು ಸಿಕ್ಕಿದ್ದು, ಅದರ ಅಂದಾಜು ಮೌಲ್ಯ ಬರೋಬ್ಬರಿ 8 ಕೋಟಿ  ರೂ ಎಂದು ರಾಜ್ಯ ಸರ್ಕಾರ ಬಹಿರಂಗಪಡಿಸಿದೆ.

ಮನೆ ಕಟ್ಟಲು ಅಡಿಪಾಯ ತೆಗೆಯುವ ಸಂದರ್ಭದಲ್ಲಿ ಪತ್ತೆಯಾಗಿದ್ದ ಚಿನ್ನಾಭರಣಗಳನ್ನು ಮನೆಯವರು ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ್ದರು. ಈ ಘಟನೆ ರಾಜ್ಯದಾದ್ಯಂತ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ನಿಧಿಯ ಐತಿಹಾಸಿಕ ಹಾಗೂ ಆರ್ಥಿಕ ಮಹತ್ವದ ಕುರಿತು ಸರ್ಕಾರವೇ ಮಾಹಿತಿ ನೀಡಿದೆ.

ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಬಳಿಕ ಮಾತನಾಡಿ, ಪತ್ತೆಯಾದ ಆಭರಣಗಳು ಸುಮಾರು 600 ವರ್ಷಗಳಷ್ಟು ಹಳೆಯವು ಎಂದು ತಿಳಿಸಿದ್ದಾರೆ.

ಇವು ಐತಿಹಾಸಿಕ ಪ್ರಾಮುಖ್ಯತೆ ಹೊಂದಿರುವ ಪ್ರಾಚೀನ ಆಂಟಿಕ್ ಒಡವೆಗಳಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಅಪಾರ ಮೌಲ್ಯ ಹೊಂದಿವೆ ಎಂದು ಹೇಳಿದ್ದಾರೆ.

ಇದೇ ವೇಳೆ ಲಕ್ಕುಂಡಿ ಪ್ರದೇಶದ ಪುರಾತತ್ವ ಮಹತ್ವವನ್ನೂ ಅವರು ವಿವರಿಸಿದ್ದು, ಇದುವರೆಗೆ 32 ದೇವಾಲಯಗಳು ಹಾಗೂ 36 ಬಾವಿಗಳನ್ನು ಪತ್ತೆಹಚ್ಚಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನೂ 68 ದೇವಾಲಯಗಳು ಮತ್ತು 64 ಬಾವಿಗಳ ಉತ್ಖನನ ಕಾರ್ಯ ಬಾಕಿಯಿದ್ದು, ಶೀಘ್ರದಲ್ಲೇ ಅದಕ್ಕೂ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share