Friday, July 24, 2026
Join WhatsApp Group
HomeCrimeʻವಿಶ್ವಾಸʼಘಾತುಕನ ವಿರುದ್ಧ ಪ್ರಕರಣ?!

ʻವಿಶ್ವಾಸʼಘಾತುಕನ ವಿರುದ್ಧ ಪ್ರಕರಣ?!

ಭಟ್ಕಳ: ಟೆಲಿಗ್ರಾಂ ಆ್ಯಪ್ ಮೂಲಕ ಇತರರ ಆಧಾರ್ ಕಾರ್ಡ್ ಹಾಗೂ ವೈಯಕ್ತಿಕ ಮಾಹಿತಿಯನ್ನು ಬಳಸಿರುವ ಆರೋಪದಡಿ ಅಪ್ರಾಪ್ತ ವಿದ್ಯಾರ್ಥಿಯೊಬ್ಬನ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ.

ಹಾವೇರಿ ಜಿಲ್ಲೆಯ ಕುನ್ನೂರ ತಡಸ ಮೂಲದ, ಭಟ್ಕಳದ ಶಿರಾಲಿಯ ಗುಮ್ಮನಹಿತ್ಲು ನಿವಾಸಿಯಾದ ಇನ್ನೂ 17ರ ಪ್ರಾಯದ ವಿದ್ಯಾರ್ಥಿಯಾದ ಆರೋಪಿತ, ತನ್ನ ಸ್ನೇಹಿತ ರಿತೇಶ ದೇವಿದಾಸ ನಾಯ್ಕ ಅವರ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ಟೆಲಿಗ್ರಾಂ ಐಡಿ ಸೃಷ್ಟಿಸಿದ್ದಾನೆ ಎನ್ನಲಾಗಿದೆ. ಬಳಿಕ ಆ ಟೆಲಿಗ್ರಾಂ ಖಾತೆಯನ್ನು ಬಳಸುವ ವೇಳೆ ಅನೇಕ ಜನರ ಆಧಾರ್ ಕಾರ್ಡ್ ಹಾಗೂ ಇತರೆ ವೈಯಕ್ತಿಕ ಮಾಹಿತಿಗಳು ಪತ್ತೆಯಾಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆಅಡಿಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share