Saturday, May 30, 2026
HomeCrimeಭಟ್ಕಳ | ಮನೆ ಕಳ್ಳತನ ಪ್ರಕರಣ: 8 ಗಂಟೆಯೊಳಗೆ ಆರೋಪಿಗಳ ಬಂಧನ

ಭಟ್ಕಳ | ಮನೆ ಕಳ್ಳತನ ಪ್ರಕರಣ: 8 ಗಂಟೆಯೊಳಗೆ ಆರೋಪಿಗಳ ಬಂಧನ

ಭಟ್ಕಳ: ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 8 ಗಂಟೆಯೊಳಗೆ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೇ 18ರ ಸಂಜೆ 5:40 ಗಂಟೆಯಿಂದ ಮೇ 20ರ ಬೆಳಗ್ಗೆ 8 ಗಂಟೆಯ ನಡುವಿನ ಅವಧಿಯಲ್ಲಿ ಭಟ್ಕಳದ ಪುರವರ್ಗ ಪ್ರದೇಶದಲ್ಲಿರುವ ಮನೆಯೊಳಗೆ ನುಗ್ಗಿದ ಕಳ್ಳರು, ಬೆಡ್ ರೂಮ್‌ನ ಬೀಗ ಒಡೆದು ಕಪಾಟಿನಲ್ಲಿದ್ದ 24 ಗ್ರಾಂ ತೂಕದ ಚಿನ್ನಾಭರಣ ಹಾಗೂ ₹37 ಸಾವಿರ ನಗದು ಕಳವು ಮಾಡಿಕೊಂಡು ಪರಾರಿಯಾಗಿದ್ದರು.

ಈ ಕುರಿತು Bhatkal Town Police Stationನಲ್ಲಿ  ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ಪತ್ತೆ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಖಚಿತ ಮಾಹಿತಿಯ ಆಧಾರದಲ್ಲಿ ಆರೋಪಿತರಾದ Mohammed Rahil ಹಾಗೂ Naushad Mukhtar Hanchi ಅವರನ್ನು ಮೇ 20ರಂದು ಭಟ್ಕಳದ ಪುರವರ್ಗದ ಸಮೀಪ ಪತ್ತೆಹಚ್ಚಿ ಬಂಧಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದು, ಅವರಿಂದ ₹2.21 ಲಕ್ಷ ಮೌಲ್ಯದ 17 ಗ್ರಾಂ ಚಿನ್ನಾಭರಣ ಹಾಗೂ ₹22,860 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈ ಕಾರ್ಯಾಚರಣೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ Deepan M N, M Krishnamurthy ಹಾಗೂ Gireesh B ಅವರ ಮಾರ್ಗದರ್ಶನದಲ್ಲಿ, ಭಟ್ಕಳ ಶಹರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ Divakar P M ನೇತೃತ್ವದಲ್ಲಿ ನಡೆದಿದೆ.

ಪ್ರಕರಣವನ್ನು ಶೀಘ್ರ ಭೇದಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಇಲಾಖೆಯಿಂದ ಅಭಿನಂದಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share