Friday, July 24, 2026
Join WhatsApp Group
HomeCrimeಮುರಿನಕಟ್ಟೆ ಪ್ರಕರಣ: ಸುಳ್ಳು ಸುದ್ದಿ ಹರಡಿದರೆ ಎಚ್ಚರ!

ಮುರಿನಕಟ್ಟೆ ಪ್ರಕರಣ: ಸುಳ್ಳು ಸುದ್ದಿ ಹರಡಿದರೆ ಎಚ್ಚರ!

ಭಟ್ಕಳ: ಮುರಿನಕಟ್ಟೆ ಧ್ವಂಸ ಪ್ರಕರಣದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್‌ಗಳು ಹಾಗೂ ಸುಳ್ಳು ಸುದ್ದಿಗಳನ್ನು ಹರಿಬಿಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ನಿರ್ಮಿಸಲಾಗಿದ್ದ ಮೂರಿನಕಟ್ಟೆ ರಚನೆಯನ್ನು ಮೇ 24ರಂದು ಕಿಡಿಗೇಡಿಗಳು ಹಾನಿಗೊಳಪಡಿಸಿದ ಹಿನ್ನೆಲೆಯಲ್ಲಿ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಈ ಘಟನೆ ಬಳಿಕ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ರೀತಿಯ ಪೋಸ್ಟ್‌ಗಳು, ವಿಡಿಯೋಗಳು ಹಾಗೂ ವದಂತಿಗಳನ್ನು ಹರಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಪ್ರಚೋದನಾಕಾರಿ ವಿಷಯಗಳನ್ನು ಹಂಚಿಕೊಂಡರೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಹಿನ್ನೆಲೆ ಭಟ್ಕಳ ಪುರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮೇ 25ರ ಬೆಳಿಗ್ಗೆ 6 ಗಂಟೆಯಿಂದ ಮೇ 27ರ ಬೆಳಿಗ್ಗೆ 6 ಗಂಟೆಯವರೆಗೆ ಬಿಎನ್‌ಎಸ್‌ಎಸ್‌ ಕಲಂ 163 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕರು ಯಾವುದೇ ಸುಳ್ಳು ಸುದ್ದಿ ಅಥವಾ ವದಂತಿಗಳಿಗೆ ಕಿವಿಗೊಡದೇ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share