Saturday, May 30, 2026
HomeUncategorizedಹಾರನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಆರಂಭ

ಹಾರನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಆರಂಭ

ಮೈಸೂರು :ಪಿರಿಯಾಪಟ್ಟಣ ತಾಲೂಕಿನ ಸಮೀಪದ ಹಾರನಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದೆ.

ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಉಚಿತ ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಈ ಶೈಕ್ಷಣಿಕ ವರ್ಷದಿಂದ ಉಚಿತ ಬಸ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಕಲಾ ವಿಭಾಗಕ್ಕೆ ಈಗಾಗಲೇ ದಾಖಲಾತಿ ಆರಂಭವಾಗಿದ್ದು, ಅನುಭವ ಹೊಂದಿದ ಹಾಗೂ ನುರಿತ ಉಪನ್ಯಾಸಕರ ತಂಡದಿಂದ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.

ಪಿರಿಯಾಪಟ್ಟಣ ತಾಲೂಕಿನ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲ ಎ.ಎಸ್. ಪ್ರಕಾಶ್ (ಮೊ: 9743255836) ಹಾಗೂ ಉಪನ್ಯಾಸಕ ಲೋಕೇಶ್ (ಮೊ: 9972630401) ಅವರನ್ನು ಸಂಪರ್ಕಿಸಬಹುದು.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share