ಕಾರವಾರ: ಅಂಕೋಲಾ ನಗರದಲ್ಲಿ ಇತ್ತೀಚೆಗೆ ಉದ್ಯಮಿ ಗೋಪಾಲಕೃಷ್ಣ ರಾಮಚಂದ್ರ ನಾಯಕ ಅವರ ಮೇಲೆ ನಡೆದಿದ್ದ ಕೊಲೆ ಯತ್ನ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದು, ಅವರ ಸುಳಿವು ನೀಡಿದವರಿಗೆ ತಲಾ 25 ಸಾವಿರ ರೂ ಬಹುಮಾನ ಘೋಷಿಸಲಾಗಿದೆ.
ತಲೆಮರೆಸಿಕೊಂಡಿರುವ ಆರೋಪಿಗಳನ್ನು ಮೊಹಮ್ಮದ್ ಇಮ್ರಾನ ಸಲ್ಮಾನಿ (46) ಸಾ. ಮಕ್ದುಮ್ ಅಸ್ರಫ್ ನಗರ, ಕೋನ್ಸುವಾಮ, ಕೊರ್ಟಾಲಿಮ್, ಮರ್ಮಗೋವಾ, ದಕ್ಷಿಣ ಗೋವಾ ಹಾಗೂ ಅಬ್ದುಲ್ ಗನಿ (31) ಸಾ. ಕೋಟೆ ಓಣಿ, ಮಾಸೂರು ಪೋಸ್ಟ್, ಹಿರೇಕೆರೂರು, ಹಾವೇರಿ ಜಿಲ್ಲೆ ಎಂದು ಗುರುತಿಸಲಾಗಿದೆ.
ಪ್ರಕರಣದ ತನಿಖೆಗಾಗಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುವುದು ಅಗತ್ಯವಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಮಾಹಿತಿ ಕೋರಲಾಗಿದೆ.
ಆರೋಪಿಗಳ ಕುರಿತು ಖಚಿತ ಮಾಹಿತಿ ಅಥವಾ ಸುಳಿವು ಇದ್ದಲ್ಲಿ ಪ್ರಕರಣದ ತನಿಖಾಧಿಕಾರಿ ಹಾಗೂ ಯಲ್ಲಾಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ಮೊಬೈಲ್ ಸಂಖ್ಯೆ-9480805258ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಾಹಿತಿ ನೀಡುವವರ ಗುರುತನ್ನು ಸಂಪೂರ್ಣ ಗೌಪ್ಯವಾಗಿಡಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದು, ಈ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 25 ಸಾವಿರ ಬಹುಮಾನ ನೀಡಲಾಗುವುದು ಎಂದು ಯಲ್ಲಾಪುರ ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.