ಮೈಸೂರು : ಪಿರಿಯಾಪಟ್ಟಣ ತಾಲ್ಲೂಕು ಬೆಟ್ಟದಪುರ ಸಮೀಪದ ನಿಲವಾಡಿ ಗ್ರಾಮದ ಗಣೇಶ್ ಎನ್.ಆರ್ ಅವರನ್ನು ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದ ಪಿರಿಯಾಪಟ್ಟಣ ತಾಲ್ಲೂಕು ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ನೇಮಕಾತಿ ಆದೇಶ ಪತ್ರವನ್ನು ಮಾಜಿ ಶಾಸಕ ಕೆ. ಮಹದೇವ್ ಅವರು ವಿತರಿಸಿದರು.
ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದ್ದು, ಗಣೇಶ್ ಎನ್.ಆರ್ ಅವರಿಗೆ ಗ್ರಾಮ ಮಟ್ಟದಲ್ಲಿ ಪಕ್ಷದ ತತ್ವ–ಸಿದ್ಧಾಂತಗಳನ್ನು ಪರಿಣಾಮಕಾರಿಯಾಗಿ ತಲುಪಿಸುವುದು ಹಾಗೂ ಕಾರ್ಯಕರ್ತರನ್ನು ಸಂಘಟಿಸುವ ಜವಾಬ್ದಾರಿಯನ್ನು ವಹಿಸಲಾಗಿದೆ.
ಈ ಮಹತ್ವದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ, ಪಕ್ಷದ ಅಭಿವೃದ್ಧಿಗೆ ಶ್ರಮಿಸುವಂತೆ ಸೂಚಿಸಿ ನೇಮಕಾತಿ ಆದೇಶ ನೀಡಲಾಗಿದೆ ಎಂದು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯ ಶೆಟ್ಟಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಚನ್ನಕೇಶವಪುರ ಸುಂದರೇಗೌಡ, ಆವರ್ತಿ ಸೋಮಶೇಖರ್, ಜೆ.ಎಸ್. ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.