ಕಾರವಾರ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಭಟ್ಕಳ ತಾಲೂಕಿನಾದ್ಯಂತ ಎಲ್ಲಾ ವಿಧದ ಮದ್ಯ ಮಾರಾಟ ಹಾಗೂ ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಮೇ 28ರ ಮಧ್ಯರಾತ್ರಿ 12 ಗಂಟೆಯಿಂದ ಮೇ 30ರ ಬೆಳಗ್ಗೆ 6 ಗಂಟೆಯವರೆಗೆ ಭಟ್ಕಳ ತಾಲೂಕಿನ ಎಲ್ಲಾ ಮದ್ಯದ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ.
ಈ ಅವಧಿಯಲ್ಲಿ ಮದ್ಯ ಮಾರಾಟ, ಸಂಗ್ರಹಣೆ ಮತ್ತು ಸಾಗಾಟಕ್ಕೂ ನಿಷೇಧ ವಿಧಿಸಲಾಗಿದ್ದು, ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.