ಯಲ್ಲಾಪುರ: ತಾಲೂಕಿನ ಸುಣಜೋಗ ಗ್ರಾಮದ ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಮೃತರನ್ನು ದಯಾನಂದ ನಾಗಪ್ಪ ಸಿದ್ದಿ (20) ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನಲ್ಲಿ ಹೋಮ್ ನರ್ಸಿಂಗ್ ಕೆಲಸ ಮಾಡುತ್ತಿದ್ದು, ಸುಮಾರು ಮೂರು ತಿಂಗಳ ಹಿಂದೆ ಊರಿಗೆ ಬಂದಿದ್ದರು.
ತಂದೆ ನಾಗಪ್ಪ ಸುಬ್ಬಾ ಸಿದ್ದಿ ನೀಡಿದ ಮಾಹಿತಿಯ ಪ್ರಕಾರ, ದಯಾನಂದ ಇತ್ತೀಚೆಗೆ ಮಾನಸಿಕವಾಗಿ ನೊಂದುಕೊಂಡಿದ್ದ. ಮೇ 27ರ ಮಧ್ಯಾಹ್ನದಿಂದ ಮೇ 28ರ ಬೆಳಿಗ್ಗೆ ನಡುವಿನ ಅವಧಿಯಲ್ಲಿ ಮನೆಯಲ್ಲಿ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಘಟನೆ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.