Home Uncategorized ಎಸ್‌ಎಂಎಸ್ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ ಸಂಭ್ರಮ

ಎಸ್‌ಎಂಎಸ್ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ ಸಂಭ್ರಮ

0
10

ಮೈಸೂರು : ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮದ ಎಸ್‌ಎಂಎಸ್ ವಿದ್ಯಾಸಂಸ್ಥೆ ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು.

ಹೊಸ ಶೈಕ್ಷಣಿಕ ವರ್ಷದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು.

Ad

ವಿದ್ಯಾಸಂಸ್ಥೆಯ ಸಂಸ್ಥಾಪಕ ಬಿ.ವಿ. ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು ಮತ್ತು ಉತ್ತಮ ಶಿಕ್ಷಣದ ಮೂಲಕ ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಎ.ವಿ. ಛಾಯಾ, ಪ್ರಾಂಶುಪಾಲ ರಾಜು, ಮುಖ್ಯಶಿಕ್ಷಕ ಎಸ್.ಆರ್. ವೆಂಕಟೇಶ್, ಕುಮಾರ್, ರಾಮೇಗೌಡ, ಉಪನ್ಯಾಸಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ad

NO COMMENTS

LEAVE A REPLY

Please enter your comment!
Please enter your name here

error: Content is protected !!