Monday, September 7, 2026
Join WhatsApp Group
HomeCrimeತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕಾರವಾರ: ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾರವಾರ ಶಹರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿಯಾಗಿರುವ ನಿಯಾಜ್ @ ಮೋಟು ದಸ್ತಗೀರ್ ಶೇಖ್ (ನಿವಾಸಿ: ಕೋಟೆಕೆರೆ ಹತ್ತಿರ, ನೆಹರುನಗರ, ಶಿರಸಿ) ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಆರೋಪಿತನ ವಿರುದ್ಧ ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿರುವುದಾಗಿ ತಿಳಿದುಬಂದಿದೆ. ಆರೋಪಿಯ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಖಚಿತ ಹಾಗೂ ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಮೇ 31ರಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಆರೋಪಿಯನ್ನು ಪತ್ತೆಹಚ್ಚುವ ಕಾರ್ಯಾಚರಣೆಯಲ್ಲಿ ಕಾರವಾರ ಶಹರ ಪೊಲೀಸ್ ಠಾಣೆಯ ಹಸನ್ ಕುಟ್ಟಿ, ಸಚಿನ್ ನಾಯ್ಕ, ಸಂಗಪ್ಪ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ತಾಂತ್ರಿಕ ವಿಭಾಗದ ಎಆರ್‌ಎಸ್‌ಐ ಬಬನ್ ಕದಂ ಮತ್ತು ಉದಯ್ ವಿ.ಗುನಗಾ ಭಾಗವಹಿಸಿದ್ದರು.

ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಕಾರವಾರ ಶಹರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಇಲಾಖೆಯಿಂದ ಅಭಿನಂದಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share