Sunday, June 14, 2026
HomeLocal Newsಚಂದಗುಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮ ಸಭೆ ಜೂ. 3, 4ಕ್ಕೆ 

ಚಂದಗುಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮ ಸಭೆ ಜೂ. 3, 4ಕ್ಕೆ 

ಯಲ್ಲಾಪುರ: ಚಂದಗುಳಿ (ಉಪಳೇಶ್ವರ) ಗ್ರಾಮ ಪಂಚಾಯತ್ ವತಿಯಿಂದ 2026-27ನೇ ಸಾಲಿನ ಮೊದಲ ಸುತ್ತಿನ ವಾರ್ಡ್ ಹಾಗೂ ಗ್ರಾಮ ಸಭೆಗಳನ್ನು ಜೂನ್ 3 ಮತ್ತು 4ರಂದು ವಿವಿಧ ಗ್ರಾಮಗಳಲ್ಲಿ ಆಯೋಜಿಸಲಾಗಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳು ಸಭೆಗಳಲ್ಲಿ ಭಾಗವಹಿಸಿ ಸಲಹೆ-ಸೂಚನೆಗಳನ್ನು ನೀಡುವಂತೆ ಗ್ರಾಮ ಪಂಚಾಯತ್ ಮನವಿ ಮಾಡಿದೆ.

ವಾರ್ಡ್ ಸಭೆಗಳ ವೇಳಾಪಟ್ಟಿ

ಚಂದಗುಳಿ ವಾರ್ಡ್ – ಜೂನ್ 3, ಬುಧವಾರ ಬೆಳಿಗ್ಗೆ 10 ಗಂಟೆಗೆ, ಹುಲೆಕೋಣೆ ವಿ.ಎಫ್.ಸಿ ಸಭಾಭವನ.

ಮಳಲಗಾಂವ ವಾರ್ಡ್ – ಜೂನ್ 3, ಬುಧವಾರ ಮಧ್ಯಾಹ್ನ 12 ಗಂಟೆಗೆ, ಹಿರಿಯ ಪ್ರಾಥಮಿಕ ಶಾಲೆ, ಮಳಲಗಾಂವ.

ಚಂದಗುಳಿ ವಾರ್ಡ್ – ಜೂನ್ 3, ಬುಧವಾರ ಮಧ್ಯಾಹ್ನ 2 ಗಂಟೆಗೆ, ಜೂಜಿನಬೈಲ್ ಶಾಲಾ ಆವರಣ.

ಸಹಸಳ್ಳಿ-ಕುರೆಘಟ್ಟ ವಾರ್ಡ್ – ಜೂನ್ 3, ಬುಧವಾರ ಸಂಜೆ 4 ಗಂಟೆಗೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಾಳ್ಯಾನಕೊಪ್ಪ.

ಗ್ರಾಮ ಸಭೆ

ಚಂದಗುಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಗ್ರಾಮಗಳು ಹಾಗೂ ಮಜರೆಗಳಾದ ಚಂದಗುಳಿ, ಹುತ್ಕಂಡ, ಮಳಲಗಾಂವ, ಸಹಸಳ್ಳಿ ಹಾಗೂ ಕೊಂಡೆಮನೆ ಗ್ರಾಮಗಳ ಗ್ರಾಮ ಸಭೆಯನ್ನು ಜೂನ್ 4, ಗುರುವಾರ ಬೆಳಿಗ್ಗೆ 11 ಗಂಟೆಗೆ ಚಂದಗುಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಗುತ್ತದೆ.

ಈ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ. ಗಾವಡೆ, ಆಡಳಿತಾಧಿಕಾರಿ ಪ್ರಸಾದ್ ಪೆಡ್ನೆಕರ್, ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ ಹಾಗೂ ನೋಡಲ್ ಅಧಿಕಾರಿ ರಾಜೇಶ್ ದನವಾಡಕರ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share