Saturday, June 13, 2026
HomeStateಡಿ.ಕೆ.ಶಿ ಪಟ್ಟಾಭಿಷೇಕ ನೋಡಲು ನಿಮಗೂ ಇದೆ ಅವಕಾಶ!

ಡಿ.ಕೆ.ಶಿ ಪಟ್ಟಾಭಿಷೇಕ ನೋಡಲು ನಿಮಗೂ ಇದೆ ಅವಕಾಶ!

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮವನ್ನು ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕರು ನೇರ ಪ್ರಸಾರದ ಮೂಲಕ ವೀಕ್ಷಿಸಬಹುದಾಗಿದೆ.

ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಅಧಿಕಾರ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ರಾಜ್ಯದ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಡಿಜಿಟಲ್ ಪರದೆಗಳ ಮೂಲಕ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯ ಸಹಯೋಗದಲ್ಲಿ ಈ ವಿಶೇಷ ಉಪಕ್ರಮವನ್ನು ಕೈಗೊಳ್ಳಲಾಗಿದೆ. ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ ಡಿಜಿಟಲ್ ಡಿಸ್‌ಪ್ಲೇ ಪರದೆಗಳ ಮೂಲಕ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಂಪೂರ್ಣ ಕಾರ್ಯಕ್ರಮವನ್ನು ನೇರವಾಗಿ ಪ್ರಸಾರ ಮಾಡಲಾಗುತ್ತದೆ.

ದೂರದ ಪ್ರದೇಶಗಳಿಗೆ ಪ್ರಯಾಣಿಸುವ ಸಾರ್ವಜನಿಕರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಜನರು ಕಾರ್ಯಕ್ರಮವನ್ನು ವೀಕ್ಷಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಜನರು ತಮ್ಮ ಸಮೀಪದ ಬಸ್ ನಿಲ್ದಾಣಗಳಲ್ಲಿಯೇ ನಿಂತು ಮುಖ್ಯಮಂತ್ರಿಗಳು ಮತ್ತು ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಉಚಿತವಾಗಿ ವೀಕ್ಷಿಸಬಹುದಾಗಿದೆ.

ಇದರ ನಡುವೆ, ಲೋಕ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ರಾಜ್ಯದ ಜನರ ಗಮನ ಇಂದು ಸಂಜೆ ನಡೆಯಲಿರುವ ಪ್ರಮಾಣ ವಚನ ಸಮಾರಂಭದತ್ತ ಕೇಂದ್ರೀಕೃತವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share