Monday, September 7, 2026
Join WhatsApp Group
HomeLocal Newsಕಾರವಾರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

ಕಾರವಾರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

ಕಾರವಾರ: ಕಾರವಾರ ನಗರಸಭೆ ವ್ಯಾಪ್ತಿಯ ಜೋನ್-2 ಪ್ರದೇಶದಲ್ಲಿ 300 ಎಂಎಂ ಸಾಮರ್ಥ್ಯದ ಮುಖ್ಯ ನೀರಿನ ಕೊಳವೆ ಒಡೆದು ಹೋಗಿರುವ ಹಿನ್ನೆಲೆಯಲ್ಲಿ ದುರಸ್ತಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಜೂನ್ 4ರಿಂದ ಜೂನ್ 7ರವರೆಗೆ ಕಾಜುಬಾಗ, ಕೋಡಿಬಾಗ ಮುಖ್ಯ ರಸ್ತೆ, ನಂದನಗದ್ದಾ, ಮಧ್ಯವಾಡ, ಶಿವಾಜಿವಾಡಾ, ಟೋಲ್‌ನಾಕಾ, ತಾಮಸೆವಾಡಾ, ನದಿವಾಡ, ಅಂಬೇಡ್ಕರ್ ಕಾಲೋನಿ, ತೆಲಂಗ ರಸ್ತೆ, ಚಂದ್ರಾದೇವಿ, ಗಿಂಡಿವಾಡಾ ಹಾಗೂ ಸುಂಕೇರಿ ಭಾಗಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ದುರಸ್ತಿ ಕಾಮಗಾರಿ ಪೂರ್ಣಗೊಳ್ಳುವವರೆಗೆ ಮೂರು ದಿನಗಳ ಕಾಲ ನೀರು ಸರಬರಾಜು ಅಸ್ತವ್ಯಸ್ತವಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಪ್ರಮಾಣದ ನೀರನ್ನು ಮುಂಚಿತವಾಗಿ ಸಂಗ್ರಹಿಸಿಕೊಂಡು ನಗರಸಭೆಯೊಂದಿಗೆ ಸಹಕರಿಸುವಂತೆ ಪೌರಾಯುಕ್ತರು ಮನವಿ ಮಾಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share