Monday, September 7, 2026
Join WhatsApp Group
HomeStateಹೋಂಸ್ಟೇಯಲ್ಲಿ ಗ್ಯಾಸ್ ಗೀಸರ್ ದುರಂತ: ಮೈಸೂರಿನ ಯುವತಿ ಸಾವು

ಹೋಂಸ್ಟೇಯಲ್ಲಿ ಗ್ಯಾಸ್ ಗೀಸರ್ ದುರಂತ: ಮೈಸೂರಿನ ಯುವತಿ ಸಾವು

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹೋಂಸ್ಟೇಯೊಂದರಲ್ಲಿ ಗ್ಯಾಸ್ ಗೀಸರ್ ಸೋರಿಕೆಯಿಂದ ಮೈಸೂರಿನ ಯುವತಿಯೊಬ್ಬರು ಮೃತಪಟ್ಟಿರುವ ದುರಂತ ಘಟನೆ ನಡೆದಿದೆ.

ಮೃತರನ್ನು ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿಗಳಾದ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನುತಾ (27) ಎಂದು ಗುರುತಿಸಲಾಗಿದೆ.

ಕುಟುಂಬದೊಂದಿಗೆ ಕೊಡಗು ಪ್ರವಾಸಕ್ಕೆ ಬಂದಿದ್ದ ವಿನುತಾ ಅವರು ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ಹೋಂಸ್ಟೇಯೊಂದರಲ್ಲಿ ತಂಗಿದ್ದರು. ಮರುದಿನ ಬೆಳಿಗ್ಗೆ ಸ್ನಾನ ಮಾಡಲು ಬಾತ್‌ರೂಂಗೆ ತೆರಳಿದ್ದ ವೇಳೆ ಅಳವಡಿಸಲಾಗಿದ್ದ ಗ್ಯಾಸ್ ಗೀಸರ್‌ನಿಂದ ಸೋರಿಕೆಯಾದ ವಿಷಕಾರಿ ಅನಿಲದಿಂದ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ನಡೆದ ಬಾತ್‌ರೂಂನಲ್ಲಿ ಸಮರ್ಪಕ ಗಾಳಿ-ಬೆಳಕಿನ ವ್ಯವಸ್ಥೆ ಇರಲಿಲ್ಲ. ವಿಶೇಷವಾಗಿ ಕಿಟಕಿ ಇಲ್ಲದಿರುವುದರಿಂದ ಅನಿಲ ಹೊರಹೋಗದೆ ಒಳಗೇ ಸಂಗ್ರಹವಾಗಿದ್ದು, ದುರಂತಕ್ಕೆ ಕಾರಣವಾಗಿರಬಹುದೆಂದು ಪ್ರಾಥಮಿಕ ತನಿಖೆಯಲ್ಲಿ ಶಂಕಿಸಲಾಗಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆ ಪ್ರವಾಸಿ ತಾಣಗಳಲ್ಲಿನ ಹೋಂಸ್ಟೇ ಹಾಗೂ ವಸತಿ ಗೃಹಗಳಲ್ಲಿ ಗ್ಯಾಸ್ ಗೀಸರ್ ಅಳವಡಿಕೆ ವೇಳೆ ಸುರಕ್ಷತಾ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವನ್ನು ಮತ್ತೊಮ್ಮೆ ನೆನಪಿಸಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share