Saturday, June 13, 2026
HomeLocal Newsರೆಡ್ ಅಲರ್ಟ್: ಮುಂದಿನ 2 ದಿನ ಎಚ್ಚರ!

ರೆಡ್ ಅಲರ್ಟ್: ಮುಂದಿನ 2 ದಿನ ಎಚ್ಚರ!

ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ನೀಡಿದ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂ.8 ಮಧ್ಯಾಹ್ನ 1 ಗಂಟೆಯಿoದ ಜೂ.10 ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಇದ್ದು, ಹೆಚ್ಚಿನ ಮಳೆಯಾಗುವ ಸಾಧ್ಯತೆಯಿರುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಜಿಲ್ಲೆಯ ಹವಾಮಾನ ಪರಿಸ್ಥಿತಿಯ ಕುರಿತಂತೆ 24*7 ವರದಿಗಳನ್ನು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣ ಹಾಗೂ ಸ್ಥಳೀಯ ಸುದ್ದಿ ಪತ್ರಿಕೆಗಳನ್ನು ಪರಿಶೀಲಿಸಬಹುದಾಗಿದೆ.

ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು.

 ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು.

ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರುವುದು ಸಾರ್ವಜನಿಕರು / ಮಕ್ಕಳು /ಕಾರ್ಮಿಕರು ಮಳೆ ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು.

ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ಮರ/ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು ದುರ್ಬಲವಾದ/ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ/ಮರಗಳ ಕೆಳಗೆ ನಿಲ್ಲಬಾರದು.

ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶಿಥಿಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌoಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು.

ಅಗತ್ಯವಿದ್ದಲ್ಲಿ ಈಗಾಗಲೇ ಸಂಬoಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಕಾಳಜಿ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆದುಕೊಳ್ಳಬೇಕು. ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕಾಲುಸಂಕ, ಕಿರು ಸೇತುವೆ ಇತ್ಯಾದಿಗಳನ್ನು ದಾಟುವ ಮುನ್ನ ಎಚ್ಚರಿಕೆ ವಹಿಸಬೇಕು.

ಶಿಥಿಲಾವಸ್ಥೆಯಲ್ಲಿರುವ ಅಥವಾ ಕುಸಿತದ ಹಂತದ ಕಂಪೌoಡ್ ಅಥವಾ ಮನೆಯ ಗೋಡೆ ಕಂಡುಬoದಲ್ಲಿ ತುರ್ತು ಸೇವೆಗೆ ಕಂಟ್ರೋಲ್ ರೂಂ-08382-229857, ವಾಟ್ಸಪ್- 9483511015 ಗೆ ಸಂಪರ್ಕಿಸುವoತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಕೆ.ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share