Saturday, June 13, 2026
HomeLocal Newsಮತದಾರರ ಪಟ್ಟಿ ಪಾರದರ್ಶಕವಾಗಿರಲಿ; ರೂಪಾಲಿ ನಾಯ್ಕ

ಮತದಾರರ ಪಟ್ಟಿ ಪಾರದರ್ಶಕವಾಗಿರಲಿ; ರೂಪಾಲಿ ನಾಯ್ಕ

ಕಾರವಾರ: ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಹಾಗೂ ಮತದಾರರ ಪಟ್ಟಿ ಸಂಪೂರ್ಣ ಪಾರದರ್ಶಕವಾಗಿರುವಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ತೊಡಗಿರುವ ತಂಡಗಳು ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ-ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಹೇಳಿದರು.

ಸೋಮವಾರ ಕಾರವಾರದ ಬಿಜೆಪಿ ಕಾರ್ಯಾಲಯದಲ್ಲಿ ಸುಭಾಷಚಂದ್ರ ಬೋಸ್ ಮತ್ತು ಚಂದ್ರಶೇಖರ ಅಜಾದ್ ಮಹಾಶಕ್ತಿ ಕೇಂದ್ರಗಳ ವ್ಯಾಪ್ತಿಯ ಕಾರ್ಯಕರ್ತರ ಸಭೆ ಹಾಗೂ ನಂದನಗದ್ದಾ ಗಣಪತಿ ದೇವಾಲಯದ ಸಭಾಭವನದಲ್ಲಿ ಭಗತ್ ಸಿಂಗ್ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಬಿಎಲ್‌ಒ-2, ಬೂತ್ ಅಧ್ಯಕ್ಷರು, ಸದಸ್ಯರ ತಂಡಗಳು ಮತ್ತು ಮಹಿಳಾ ಪ್ರಮುಖರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮತದಾರರ ಪಟ್ಟಿ ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ರಚಿಸಲಾದ ತಂಡಗಳ ಸದಸ್ಯರು, ಬಿಎಲ್‌ಒ-2, ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ತಮಗೆ ವಹಿಸಲಾದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.

ಸಭೆಯಲ್ಲಿ ನಗರ ಮಂಡಲ ಅಧ್ಯಕ್ಷ ನಾಗೇಶ ಕುರ್ಡೇಕರ, ನಗರ ಮಂಡಲ ಪ್ರಭಾರಿ ರಾಜು ಭಂಡಾರಿ, ನಗರಸಭೆಯ ನಿಕಟಪೂರ್ವ ಅಧ್ಯಕ್ಷ ರವಿರಾಜ ಅಂಕೋಲೆಕರ, ರಾಜ್ಯ ಪ್ರಕೋಷ್ಟ ಸದಸ್ಯ ಸುನೀಲ ಸೋನಿ, ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಬಿಜೆಪಿ ಸಂಘಟನಾ ಸಂಯೋಜಕರಾಗಿ ನೇಮಕಗೊಂಡಿರುವ ರೂಪಾಲಿ ಎಸ್. ನಾಯ್ಕ ಅವರನ್ನು ಪಕ್ಷದ ಕಾರ್ಯಕರ್ತರು ಅಭಿನಂದಿಸಿ ಸನ್ಮಾನಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share