ಅಂಕೋಲಾ: ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಸರಾಯಿ ಸ್ಯಾಚೇಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಂಕೋಲಾ ಪೊಲೀಸರು ಬಂಧಿಸಿದ್ದು, ಮದ್ಯ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಅಂಕೋಲಾ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಗುರುನಾಥ ಹಾದಿಮನಿ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಅಂಕೋಲಾ ತಾಲೂಕಿನ ಹಿಲ್ಲೂರ ಸಮೀಪದ ಹೊಳೆಮಕ್ಕಿ ಕ್ರಾಸ್ ಬಳಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಹೊಳೆಮಕ್ಕಿ ನಿವಾಸಿ ತಿಮ್ಮಣ್ಣ ದೇವಣ್ಣ ನಾಯಕ (65) ಎಂಬಾತ ಅಕ್ರಮವಾಗಿ ಸರಾಯಿ ಮಾರಾಟ ನಡೆಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.
ದಾಳಿಯ ವೇಳೆ ವಿವಿಧ ಬ್ರಾಂಡ್ಗಳ ಒಟ್ಟು 52 ಸರಾಯಿ ಸ್ಯಾಚೇಟ್ ಹಾಗೂ ಟೆಟ್ರಾ ಪ್ಯಾಕ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ₹2,850 ಎಂದು ಅಂದಾಜಿಸಲಾಗಿದೆ. ಆರೋಪಿಯು ಅಂಕೋಲಾದ ಲಕ್ಷ್ಮೀ ವೈನ್ಸ್ ಮದ್ಯದಂಗಡಿಯಿಂದ ಮದ್ಯ ಖರೀದಿಸಿ ಪರವಾನಗಿ ಇಲ್ಲದೆ ಮಾರಾಟ ಮಾಡುತ್ತಿದ್ದನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ತಿಮ್ಮಣ್ಣ ದೇವಣ್ಣ ನಾಯಕ ಹಾಗೂ ಲಕ್ಷ್ಮೀ ವೈನ್ಸ್ ಮಾಲೀಕರ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.