Monday, September 7, 2026
Join WhatsApp Group
HomeLocal Newsನೀಟ್ ಮರು ಪರೀಕ್ಷೆ ಕಟ್ಟುನಿಟ್ಟಾಗಿರಲಿ; ಡಿಸಿ

ನೀಟ್ ಮರು ಪರೀಕ್ಷೆ ಕಟ್ಟುನಿಟ್ಟಾಗಿರಲಿ; ಡಿಸಿ

ಕಾರವಾರ: ನೀಟ್ ಮರು ಪರೀಕ್ಷೆಯು ಜೂ. 21ರಂದು ಕಾರವಾರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಪದವಿ ಕಾಲೇಜು ನಲ್ಲಿ ನಡೆಯಲಿದ್ದು, ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಪಾರದರ್ಶಕ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ನಡೆಯುವ ನೀಟ್ ಪರೀಕ್ಷೆಗೆ 537 ವಿದ್ಯಾರ್ಥಿಗಳು ಹಾಜರಾಗಲಿದ್ದು, ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದಂತಹ ಮೂಲಸೌಕರ್ಯ ವ್ಯವಸ್ಥೆಗಳು ಇರುವುದನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮುಂಚಿತವಾಗಿ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು ಎಂದರು.

ಪರೀಕ್ಷೆ ನಡೆಯುವ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಮತ್ತು ಪರೀಕ್ಷಾ ದಿನದಂದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಆಗಮಿಸಲು ಬಸ್‌ಗಳ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಮಳೆ ಪ್ರಾರಂಭವಾಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಜಿ.ಪಂ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಸರ್ಕಾರಿ ಕಲಾ ಮತ್ತು ವಿಜ್ಞಾನ ಪದವಿ ಕಾಲೇಜಿನ ಪ್ರಾಂಶುಪಾಲೆ ಗೀತಾ ವಾಲೀಕರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಇದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share