Saturday, June 13, 2026
HomeLocal Newsಮೋದಿಯವರ ನಿರಂತರ ಆಡಳಿತದ ದಾಖಲೆಗೆ ಅಭಿನಂದನೆ

ಮೋದಿಯವರ ನಿರಂತರ ಆಡಳಿತದ ದಾಖಲೆಗೆ ಅಭಿನಂದನೆ

ಯಲ್ಲಾಪುರ: 2014ರ ಮೇ 26ರಂದು ಭಾರತದ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿ ಅವರು 4,399 ದಿನಗಳ ನಿರಂತರ ಆಡಳಿತವನ್ನು ಪೂರ್ಣಗೊಳಿಸಿ, ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರು ಅವರ ದಾಖಲೆಯನ್ನು ಹಿಂದಿಕ್ಕಿರುವುದು ದೇಶದ ರಾಜಕೀಯ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ಬಿಜೆಪಿ ಮುಖಂಡ ರಾಮು ನಾಯ್ಕ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ಹನ್ನೆರಡು ವರ್ಷಗಳ ಅವಧಿಯಲ್ಲಿ ಭಾರತವು ಮೂಲಸೌಕರ್ಯ, ರಾಷ್ಟ್ರೀಯ ಭದ್ರತೆ, ವಿದೇಶಾಂಗ ನೀತಿ, ಡಿಜಿಟಲ್ ತಂತ್ರಜ್ಞಾನ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡಿದೆ.

ದೇಶದ ಗಡಿಭದ್ರತೆ ಮತ್ತಷ್ಟು ಬಲಗೊಂಡಿದ್ದು, ಸಶಸ್ತ್ರ ಪಡೆಗಳ ಆತ್ಮವಿಶ್ವಾಸ ಹೆಚ್ಚಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪ್ರಭಾವ ವಿಸ್ತರಿಸಿದ್ದು, ವಿಶ್ವದ ಪ್ರಮುಖ ರಾಷ್ಟ್ರಗಳು ಭಾರತದೊಂದಿಗೆ ಸಹಕಾರ ಮತ್ತು ಪಾಲುದಾರಿಕೆಗೆ ಹೆಚ್ಚಿನ ಮಹತ್ವ ನೀಡುತ್ತಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಭಾರತವು ಜಾಗತಿಕ ಆರ್ಥಿಕತೆಯಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದ್ದು, ಸ್ವಾತಂತ್ರ್ಯದ ಶತಮಾನೋತ್ಸವ ವರ್ಷವಾದ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ.

ಪ್ರಧಾನಮಂತ್ರಿ ಮೋದಿಯವರ ನೇತೃತ್ವದಲ್ಲಿ ಭಾರತ ಇನ್ನಷ್ಟು ಅಭಿವೃದ್ಧಿ ಸಾಧಿಸಲಿ, ವಿಶ್ವ ಮಟ್ಟದಲ್ಲಿ ತನ್ನ ಗೌರವವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲಿ ಎಂದು ಹಾರೈಸಿರುವ ರಾಮು ನಾಯ್ಕ, ದೇಶದ ಸಮಗ್ರ ಅಭಿವೃದ್ಧಿಗಾಗಿ ಪ್ರತಿಯೊಬ್ಬ ನಾಗರಿಕರೂ ಸಹಕಾರ ಮತ್ತು ಬೆಂಬಲ ನೀಡಬೇಕೆಂದು ಕರೆ ನೀಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share