ಕಾರವಾರ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI), ಕುಮಟಾ ವತಿಯಿಂದ ಕೃಷಿ ಉದ್ಯಮಿ ಕಾರ್ಯಕ್ರಮದಡಿ ಕೋಳಿ ಸಾಕಾಣಿಕೆ ಹಾಗೂ ಜೇನು ಸಾಕಾಣಿಕೆ ಕುರಿತ 13 ದಿನಗಳ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ.
ಜೂನ್ 18ರಿಂದ ಜೂನ್ 30ರವರೆಗೆ ನಡೆಯಲಿರುವ ಈ ತರಬೇತಿಯಲ್ಲಿ ಗ್ರಾಮೀಣ ಪ್ರದೇಶದ ಬಿಪಿಎಲ್ ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ಸೌಲಭ್ಯವನ್ನು ಉಚಿತವಾಗಿ ಒದಗಿಸಲಾಗುತ್ತದೆ.
ಅಭ್ಯರ್ಥಿಗಳು ನಿರುದ್ಯೋಗಿಗಳಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅರ್ಜಿದಾರರ ವಯಸ್ಸು 18ರಿಂದ 45 ವರ್ಷಗಳೊಳಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು ಹಾಗೂ ತರಬೇತಿಗೆ ಅಗತ್ಯವಾದ ಕನಿಷ್ಠ ಜ್ಞಾನ ಹೊಂದಿರಬೇಕು.
ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ ಇವರಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.
ತರಬೇತಿಗೆ ಆಗಮಿಸುವ ಸಂದರ್ಭದಲ್ಲಿ 4 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಹಾಗೂ ಪ್ಯಾನ್ ಕಾರ್ಡ್ಗಳ ತಲಾ ಒಂದು ಜೆರಾಕ್ಸ್ ಪ್ರತಿಯನ್ನು ತರಬೇಕು.
ಹೆಚ್ಚಿನ ಮಾಹಿತಿಗಾಗಿ 08386-220530, 9449860007, 9538281989, 9916783825, 8880444612 ಹಾಗೂ 9620962004 ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.