Saturday, June 13, 2026
HomeLocal Newsಅಪ್ರಾಪ್ತರ ಕೈಗೆ ಬೈಕು; ಪಾಲಕರಿಗೆ ಬಿತ್ತು ಭಾರೀ ದಂಡ!

ಅಪ್ರಾಪ್ತರ ಕೈಗೆ ಬೈಕು; ಪಾಲಕರಿಗೆ ಬಿತ್ತು ಭಾರೀ ದಂಡ!

ಯಲ್ಲಾಪುರ: ಅಪ್ರಾಪ್ತ ಬಾಲಕರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸರು ದಾಖಲಿಸಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಾಹನ ಮಾಲೀಕರಿಗೆ ಮಾನ್ಯ ನ್ಯಾಯಾಲಯವು ತಲಾ ₹25,000 ದಂಡ ವಿಧಿಸಿದೆ.

ಜೂನ್‌ 9ರಂದು ಕಿರವತ್ತಿಯ ಬಳಿ ಇಬ್ಬರು ಅಪ್ರಾಪ್ತ ಹುಡುಗರು ಬೈಕ್‌ ಓಡಿಸಿಕೊಂಡು ಬರುತ್ತಿದ್ದು, ಕರ್ತವ್ಯದಲ್ಲಿದ್ದ ಪೊಲೀಸರು ಇದನ್ನು ಗಮನಿಸಿ, ಹುಡುಗರನ್ನು ತಡೆದು ನಿಲ್ಲಿಸಿದ್ದರು.

ಆದರೆ ಅವರ ಬಳಿ ಡಿಎಲ್‌ ಇರಲಿಲ್ಲ. ಈ ಬಗ್ಗೆ ಹುಡುಗರ ಪಾಲಕರಿಗೂ ತಿಳಿಸಿ, ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಯಲ್ಲಾಪುರ ಪೊಲೀಸ್ ಠಾಣೆಯ ಪಿಎಸ್‌ಐ ಅವರು ದಾಖಲಿಸಿದ್ದ ಪ್ರಕರಣಗಳ ವಿಚಾರಣೆ ಬಳಿಕ, ವಾಹನ ಮಾಲೀಕರ ವಿರುದ್ಧ ಕ್ರಮ ಕೈಗೊಂಡಿರುವ ನ್ಯಾಯಾಲಯ ತಲಾ ₹25 ಸಾವಿರ ದಂಡ ವಿಧಿಸಿದೆ.

18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ವಾಹನ ಚಾಲನೆ ಮಾಡಲು ಅವಕಾಶ ಕಲ್ಪಿಸುವುದು ಮೋಟಾರು ವಾಹನ ಕಾಯ್ದೆಯ ಕಲಂ 199A ಅಡಿಯಲ್ಲಿ ಅಪರಾಧವಾಗಿದ್ದು, ಅಪ್ರಾಪ್ತರು ವಾಹನ ಚಲಾಯಿಸುವ ವೇಳೆ ಸಂಭವಿಸಬಹುದಾದ ಅಪಘಾತಗಳು ಮತ್ತು ಜೀವಹಾನಿಯನ್ನು ತಡೆಯುವ ಉದ್ದೇಶದಿಂದ ಕಾನೂನಿನಲ್ಲಿ ಕಠಿಣ ಶಿಕ್ಷೆಯ ವ್ಯವಸ್ಥೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಪಾಲಕರು ಹಾಗೂ ವಾಹನ ಮಾಲೀಕರು ತಮ್ಮ ಮಕ್ಕಳು ಅಥವಾ ಅಪ್ರಾಪ್ತರಿಗೆ ಬೈಕ್, ಸ್ಕೂಟರ್, ಕಾರು ಸೇರಿದಂತೆ ಯಾವುದೇ ವಾಹನಗಳನ್ನು ಚಾಲನೆ ಮಾಡಲು ನೀಡಬಾರದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅಪ್ರಾಪ್ತರಿಂದ ವಾಹನ ಚಾಲನೆ ಕಂಡುಬಂದಲ್ಲಿ ವಾಹನ ಮಾಲೀಕರ ಮೇಲೆಯೇ ಕಾನೂನು ಕ್ರಮ ಜರುಗುವ ಸಾಧ್ಯತೆ ಇದ್ದು, ಭಾರಿ ದಂಡ ಹಾಗೂ ಇತರ ಶಿಕ್ಷೆಗಳನ್ನು ಎದುರಿಸಬೇಕಾಗಬಹುದು ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಅಪಘಾತಗಳನ್ನು ತಡೆಯಲು ಸಹಕರಿಸಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share