Monday, September 7, 2026
Join WhatsApp Group
HomeLocal Newsಸರಕಾರಿ ನೌಕರರು ಖಾದಿ ಉಡುಪು ಖರೀದಿಸಿ!

ಸರಕಾರಿ ನೌಕರರು ಖಾದಿ ಉಡುಪು ಖರೀದಿಸಿ!

ತಿಂಗಳ ಮೊದಲ ಶನಿವಾರ ಖಾದಿ ಉಡುಪು ಧರಿಸಿ

ಕಾರವಾರ: ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸುತ್ತೋಲೆಯಲ್ಲಿ ರಾಜ್ಯ ಸರ್ಕಾರವು ಖಾದಿ ಬಳಕೆಯನ್ನು ಉತ್ತೇಜಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಅದರಂತೆ ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ನಿಗಮ/ ಮಂಡಳಿ/ ಸ್ವಾಯತ್ತ ಸಂಸ್ಥೆಗಳು/ವಿಶ್ವವಿದ್ಯಾಲಯಗಳ ಅಧಿಕಾರಿ/ನೌಕರರು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದು, ಅಲ್ಲದೇ ಸ್ವಾತಂತ್ರ‍್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ನಿರ್ದೇಶನ ನೀಡಲು ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಸರಕಾರಿ ನೌಕರರು ಖಾದಿ ಉಡುಪುಗಳನ್ನು ಖರೀದಿಸಲು ಅನುಕೂಲವಾಗುವಂತೆ ಫೆೆಬ್ರವರಿ 7ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಖಾದಿ ಹುಟ್ಟುವಳಿ ಕೇಂದ್ರ, ಹೆಬ್ಬಳ್ಳಿ ಇವರಿಗೆ ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲಿ ತಾತ್ಕಾಲಿಕ ಮಳಿಗೆಯನ್ನು ತೆರೆದು ವ್ಯಾಪಾರ ಮಾಡಲು ಸ್ಥಳಾವಕಾಶ ಕಲ್ಪಿಸಲಾಗಿದ್ದು, ವಿವಿಧ ಇಲಾಖೆಯ ಎಲ್ಲಾ ಸರ್ಕಾರಿ ನೌಕರರು ಈ ಅವಕಾಶದ ಲಾಭ ಪಡೆದುಕೊಳ್ಳುವಂತೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಪ್ರಕಟಣೆ ತಿಳಿಸಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share