Monday, September 7, 2026
Join WhatsApp Group
HomeCrimeಆಡುವ ವಯಸ್ಸಿಗೆ ಅಮ್ಮನಾದ ಮುಗ್ಧ ಬಾಲಕಿ; ವಸತಿ ನಿಲಯದಲ್ಲಿ ಅಪ್ರಾಪ್ತೆಗೆ ಹೆರಿಗೆ?!

ಆಡುವ ವಯಸ್ಸಿಗೆ ಅಮ್ಮನಾದ ಮುಗ್ಧ ಬಾಲಕಿ; ವಸತಿ ನಿಲಯದಲ್ಲಿ ಅಪ್ರಾಪ್ತೆಗೆ ಹೆರಿಗೆ?!

ಶಿರಸಿ: ವಿದ್ಯಾರ್ಥಿನಿಯರ ವಸತಿ ನಿಲಯವೊಂದರಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಹೆರಿಗೆ ಮಾಡಿಕೊಂಡು, ನವಜಾತ ಶಿಶು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿರುವ ಮಾಹಿತಿ ಕೇಳಿಬಂದಿದೆ.

ತಾಲೂಕಿನ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ವಾಸವಾಗಿದ್ದ ಅಪ್ರಾಪ್ತ ಬಾಲಕಿ ಶೌಚಾಲಯದಲ್ಲಿ ಹೆರಿಗೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಬಳಿಕ ನವಜಾತ ಶಿಶು ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ. ಆಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಹೇಳಿಕೆ ದಾಖಲಿಸಿಕೊಂಡಿರುವ ಪೊಲೀಸರು, ಗರ್ಭಧಾರಣೆಗೆ ಕಾರಣವಾದ ವ್ಯಕ್ತಿಯ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ  ತನಿಖೆ ಕೈಗೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಕೂಡ ಮಾಹಿತಿ ಸಂಗ್ರಹಿಸಿ ಅಗತ್ಯ ಕ್ರಮಗಳನ್ನು ಆರಂಭಿಸಿರುವುದಾಗಿ ತಿಳಿದುಬಂದಿದೆ.

ಬಾಲಕಿಯ ಭವಿಷ್ಯದ ದೃಷ್ಟಿಯಿಂದ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share