Ad
Home Local News ಜಿಲ್ಲೆಯ 29 ಕಂದಾಯ ಸಿಬ್ಬಂದಿಗಳಿಗೆ ಪದೋನ್ನತಿ

ಜಿಲ್ಲೆಯ 29 ಕಂದಾಯ ಸಿಬ್ಬಂದಿಗಳಿಗೆ ಪದೋನ್ನತಿ

0
6

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ದ್ವಿತೀಯ ದರ್ಜೆ ಸಹಾಯಕರಿಗೆ ಕರ್ನಾಟಕ ರಾಜ್ಯ ಕಂದಾಯ ಸೇವೆಗಳ (ವೃಂದ ಮತ್ತು ನೇಮಕಾತಿ) ನಿಯಮಗಳು–2026ರ ಅನ್ವಯ ಪ್ರಥಮ ದರ್ಜೆ ಸಹಾಯಕ ಮತ್ತು ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಹುದ್ದೆಗಳಿಗೆ ಪದೋನ್ನತಿ ನೀಡಲಾಗಿದೆ.

ಈ ಕುರಿತು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದು, ಒಟ್ಟು 29 ಸಿಬ್ಬಂದಿಗೆ ಪದೋನ್ನತಿ ಲಭಿಸಿದೆ.

ಜಿಲ್ಲಾ ಕಂದಾಯ ಘಟಕದ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ದ್ವಿತೀಯ ದರ್ಜೆ ಸಹಾಯಕರ ಅಂತಿಮ ಸಂಯುಕ್ತ ಜೇಷ್ಠತಾ ಪಟ್ಟಿ ಪ್ರಕಟಗೊಂಡ ಬಳಿಕ ಜೂನ್ 9ರಂದು ಇಲಾಖಾ ಮುಂಬಡ್ತಿ ಸಮಿತಿ ಸಭೆ ನಡೆಸಲಾಗಿತ್ತು. ಸಿಬ್ಬಂದಿಯ ಸೇವಾ ದಾಖಲೆಗಳು ಹಾಗೂ ನಿಯಮಾನುಸಾರ ಅರ್ಹತೆಯನ್ನು ಪರಿಶೀಲಿಸಿದ ಸಮಿತಿಯು ಪದೋನ್ನತಿಗೆ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಪದೋನ್ನತಿ ಆದೇಶ ಹೊರಬಿದ್ದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹಾಗೂ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಚಾಂದಬಾಷಾ ಮುಲ್ಲಾ, ರಾಜ್ಯದಲ್ಲೇ ಮೊದಲ ಬಾರಿಗೆ ಈ ರೀತಿಯ ಪದೋನ್ನತಿ ಪ್ರಕ್ರಿಯೆ ಜಾರಿಯಾಗಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ಪ್ರಕ್ರಿಯೆ ಯಶಸ್ವಿಯಾಗಲು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಶಿರಸ್ತೇದಾರ ಶೇಖ್, ವಿಷಯ ನಿರ್ವಾಹಕ ಶಿವಾನಂದ ಸಾಳುಂಕೆ ಸೇರಿದಂತೆ ಸಂಬಂಧಿತ ಅಧಿಕಾರಿಗಳ ಸಹಕಾರ ಕಾರಣವಾಗಿದೆ ಎಂದು ಕೃತಜ್ಞತೆ ಸಲ್ಲಿಸಿದರು.

ಅಲ್ಲದೆ, ರಾಜ್ಯಾಧ್ಯಕ್ಷ ಯೋಗೇಶ್ ನಾಯ್ಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ನಾಯ್ಕ್ ಹಾಗೂ ರಾಜ್ಯ ಸಂಘದ ಪದಾಧಿಕಾರಿಗಳಿಗೂ ಅವರು ಧನ್ಯವಾದ ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಕ್ಷಿತ ಪೂಜಾರಿ, ಖಜಾಂಚಿ ಚರಣ್ ಗೌಡ, ಉಪಾಧ್ಯಕ್ಷ ಕೋಟ್ರೇಶ ಎನ್.ಬಿ., ಸಂದೀಪ್, ಮಂಜುನಾಥ ನಾಯ್ಕ, ಲತಾ ನಾಯ್ಕ, ಆಶಾ ಭಟ್ಟ, ಸಂತೋಷ, ಗಣೇಶ ಕುಲಾಲ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Previous articleಶಿಸ್ತು, ಪರಿಶ್ರಮದೊಂದಿಗೆ ಗುರಿ ಸಾಧಿಸಿ
Next articleಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳ ಬೆಳವಣಿಗೆ ಕುಂಠಿತ
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!